ಬೆಂಗಳೂರು: ‘ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ನನಗೇ ಟಿಕೆಟ್ ಸಿಗುವ ವಿಶ್ವಾಸವಿದೆ’ ಎಂದು ಈ ಕ್ಷೇತ್ರದ ಹಾಲಿ ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಬೇರೆಯವರಿಗೆ ಟಿಕೆಟ್ ಕೊಡಿ ಎಂದು ಹಿಂದೆ ಹೇಳಿದ್ದೆ. ಕ್ಷೇತ್ರದ ಎಲ್ಲ ಶಾಸಕರು ಮತ್ತು ಮುಖಂಡರು ನೀವೇ ಅಭ್ಯರ್ಥಿಯಾಗಬೇಕು ಎಂದು ಒತ್ತಾಯ ಮಾಡಿದ್ದರು. ಆ ಕಾರಣದಿಂದ ಟಿಕೆಟ್ ಬಯಸಿದ್ದೇನೆ’ ಎಂದರು.

‘ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ. ಬಿ.ಎಸ್. ಯಡಿಯೂರಪ್ಪ ಅವರ ನಂತರದಲ್ಲಿ ನನಗೆ ಹೆಚ್ಚು ಅವಕಾಶಗಳನ್ನು ನೀಡಿದೆ. ಆದರೆ, ಈಗ ಟಿಕೆಟ್ ಕೊಡದೇ ಇದ್ದರೆ ಸ್ವಲ್ಪ ನೋವಾಗುತ್ತದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.