ಬೆಂಗಳೂರು: ‘ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಹೈದರಾಬಾದ್ನಲ್ಲಿ ದಾಖಲಾಗಿರುವ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. 40 ವರ್ಷಗಳ ಶೈಕ್ಷಣಿಕ ವೃತ್ತಿ ಜೀವನದ ಅವಧಿಯಲ್ಲಿ ಯಾವತ್ತೂ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಿಲ್ಲ’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಪ್ರಾಧ್ಯಾಪಕ ಪ್ರೊ.ಬಿ.ಸಿ. ಮೈಲಾರಪ್ಪ ತಿಳಿಸಿದ್ದಾರೆ.

ಪ್ರಕರಣದ ಬಗ್ಗೆ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಹೈದರಾಬಾದ್ ಪೊಲೀಸ್ ಠಾಣೆಯಲ್ಲಿ 2023ರಲ್ಲೇ ಪ್ರಕರಣ ದಾಖಲಾಗಿತ್ತು. ಆ ಪ್ರಕರಣದಲ್ಲಿ ಜಮೀನು ಮಾರುವವರು ಮತ್ತು ಖರೀದಿದಾರರ ಮಧ್ಯೆ ಹಣಕಾಸಿನ ವ್ಯವಹಾರ ನಡೆದಿತ್ತು. ನಾನು ಮಾರಾಟಗಾರರ ಪರವಾಗಿ ಮಧ್ಯ ಪ್ರವೇಶಿಸಿ ಬೆದರಿಕೆ ಹಾಕಿದ್ದೇನೆ ಎಂಬ ಆರೋಪದಲ್ಲಿ ಹುರುಳಿಲ್ಲ’ ಎಂದಿದ್ದಾರೆ.

‘ನನ್ನ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣ ದಾಖಲಾಗಿಲ್ಲ. ಮುಚ್ಚಳಿಕೆ ಪತ್ರಕ್ಕೆ ಸಹಿ ಹಾಕುವುದಕ್ಕಾಗಿ ಹೈದರಾಬಾದ್ನ ಪೊಲೀಸರು ಅಲ್ಲಿಗೆ ಕರೆದೊಯ್ದಿದ್ದರು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.