ಬೆಂಗಳೂರು: 'ಎಚ್. ಕಾಂತರಾಜ ಆಯೋಗದ ವರದಿ ಮತ್ತು ಮೀಸಲಾತಿ ಪ್ರಮಾಣ ಹೆಚ್ಚಿಸುವ ಕುರಿತಂತೆ ಚರ್ಚಿಸಲು ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿ ನ. 2ರಂದು ಒಕ್ಕಲಿಗರ ಸಂಘ ಮತ್ತು ಮೀಸಲಾತಿ ಹೋರಾಟ ಸಮಿತಿಯ ಸಭೆ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಯಲಚವಾಡಿ ತಿಳಿಸಿದ್ದಾರೆ.

‘ಈ ವಿಚಾರವಾಗಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿಯವರ ಸಾನಿಧ್ಯದಲ್ಲಿ ಚರ್ಚೆ ನಡೆಸಲಾಗಿದೆ. 2ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಭೆಗೆ ಸಮಾಜದ ಸಚಿವರು, ಶಾಸಕರು ಮತ್ತು ಸಂಸದರನ್ನು ಆಹ್ವಾನಿಸಲಾಗುವುದು. ಈ ಸಭೆಯ ಸಾನ್ನಿಧ್ಯವನ್ನು ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದಾರೆ. ನಂಜಾವದೂತ ಸ್ವಾಮೀಜಿ, ಚಂದ್ರಶೇಖರನಾಥ ಸ್ವಾಮೀಜಿ ಕೂಡಾ ಸಭೆಯಲ್ಲಿ ಭಾಗವಹಿಸಲಿದ್ದಾರೆ’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.