ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಜ್ಯದ 10 ಮಹಾನಗರ ಪಾಲಿಕೆಗಳ ಸಿಬ್ಬಂದಿ ಜುಲೈ 29ರಂದು ಪ್ರತಿಭಟನೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಸಂಘ ತಿಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜುಲೈ 11ರಂದು ಪತ್ರ ಬರೆದಿರುವ ಸಂಘದ ಅಧ್ಯಕ್ಷ ಎ. ಅಮೃತ್ರಾಜ್, ‘7ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು. ಹೊಸ ಪಿಂಚಣಿ ಪದ್ಧತಿಯನ್ನು ರದ್ದುಪಡಿಸಬೇಕು, ಪಾಲಿಕೆಗಳ ನೌಕರರು ಆಡಳಿತ ಸೌಲಭ್ಯಗಳನ್ನು ಪಡೆಯಲು ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ತರಬೇಕು, ಮಹಾನಗರ ಪಾಲಿಕೆಗಳ ನೌಕರರಿಗೂ ಕೆಜಿಐಡಿ ಮತ್ತು ಸಾಮಾನ್ಯ ಭವಿಷ್ಯ ನಿಧಿ, ಆರೋಗ್ಯ ಸಂಜೀವಿನ ಯೋಜನೆ ಜಾರಿ ಮಾಡಬೇಕು’ ಎಂದು ಬೇಡಿಕೆ ಇರಿಸಿದ್ದಾರೆ.

‘ಮಹಾನಗರ ಪಾಲಿಕೆಗಳ ನೌಕರರು ತಮ್ಮ ಬೇಡಿಕೆಗಾಗಿ ಸಾಕಷ್ಟು ಮನವಿ ಸಲ್ಲಿಸಿದ್ದಾರೆ. ಆದರೂ ಕ್ರಮ ಜರುಗಿಸಿಲ್ಲ . ಹೀಗಾಗಿ, ಜುಲೈ 29ರಂದು ಸಾಮೂಹಿಕ ರಜೆ ಹಾಕಿ, ಗೈರುಹಾಜರಾಗುವ ಮೂಲಕ ಪ್ರತಿಭಟಿಸಲು ನಿರ್ಧರಿಸಲಾಗಿದೆ’ ಎಂದು ಅಮೃತ್ರಾಜ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.