ಬೆಂಗಳೂರು: ‘ಪರಿಸರಕ್ಕೆ ಹಾನಿ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ, ಸಾಗಣೆ, ಸಂಗ್ರಹ ಹಾಗೂ ಉತ್ಪಾದನೆಯ ಮೇಲೆ ಕಣ್ಗಾವಲಿಗಾಗಿ ವಿಚಕ್ಷಣಾ ದಳ ರಚಿಸಲು ಚಿಂತಿಸಲಾಗಿದೆ’ ಎಂದು ಅರಣ್ಯ, ಜೀವಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

‘ಮುಂದಿನ ಸಚಿವ ಸಂಪುಟದಲ್ಲೇ ಜಾಗೃತ ದಳದ ರೂಪುರೇಷೆ ಕುರಿತು ಚರ್ಚಿಸಲಾಗುವುದು. ದಳದಲ್ಲಿ ಯಾರೆಲ್ಲಾ ಇರಬೇಕು ಎಂಬುದರ ಕುರಿತೂ ತೀರ್ಮಾನ ತೆಗೆದುಕೊಳ್ಳಲಾಗುವುದು. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ತೆರಿಗೆ ಇಲಾಖೆ ಅಧಿಕಾರಿಗಳನ್ನೂ ಈ ದಳಕ್ಕೆ ಸೇರಿಸಿಕೊಂಡು, ಸುಪ್ರೀಂ ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಪಟಾಕಿ ತಯಾರಿಕೆ ಘಟಕಗಳಿಂದ ಮಾದರಿ ಸಂಗ್ರಹಿಸಿ ಪ್ರಯೋಗಾಲದಲ್ಲಿ ಪರಿಶೀಲಿಸಿ ಪಟಾಕಿ ರಾಸಾಯನಿಕಯುಕ್ತವೇ ಅಥವಾ ಹಸಿರು ಪಟಾಕಿಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಲಾಗುವುದು. ಬಳಿಕ ಕ್ರಮ ಕೈಗೊಳ್ಳಲಾಗುವುದು. ಜಾಗೃತ ದಳ ಉತ್ತಮವಾಗಿ ಕೆಲಸ ಮಾಡಿದರೆ, ಶೇ 80ರಷ್ಟು ನಿಷೇಧಿತ ಪಟಾಕಿ ಉತ್ಪಾದನೆ, ಮಾರಾಟ ನಿಯಂತ್ರಣಕ್ಕೆ ತರಲು ಸಾಧ್ಯವಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ದಸರಾ, ದೀಪಾವಳಿ ವೇಳೆ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ರಾಸಾಯನಿಕಯುಕ್ತ ಪಟಾಕಿ ಬಳಕೆಯಿಂದ ಶಬ್ದ ಮಾಲಿನ್ಯ, ವಾಯು ಮಾಲಿನ್ಯವಾಗುತ್ತಿದೆ. ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಿ, ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ಹೊರಡಿಸಿದೆ’ ಎಂದು ಹೇಳಿದರು.

‘ಹಸಿರು ಪಟಾಕಿ ದಾಸ್ತಾನು ಮಾಡಿಕೊಂಡಿದ್ದರೆ ತೊಂದರೆ ಇಲ್ಲ. ಹಸಿರು ಪಟಾಕಿಗೆ ಲಾಂಛನವಿದೆ. ಬೇರೆ ಪಟಾಕಿ ದಾಸ್ತಾನಿಗೆ ಅವಕಾಶವೇ ಇಲ್ಲ’ ಎಂದು ಹೇಳಿದರು.

‘ಹೊರ ರಾಜ್ಯಗಳಿಂದ ನಿಷೇಧಿತ ಪಟಾಕಿಯನ್ನು ರಾಜ್ಯದ ಒಳಗೆ ತರುತ್ತಿದ್ದರೆ ರಾಜ್ಯದ ಗಡಿಗಳಲ್ಲೇ ಜಪ್ತಿ ಮಾಡಿಕೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.