ಬೆಂಗಳೂರು: ವೈದ್ಯಕೀಯ ಕ್ಷೇತ್ರಕ್ಕೆ ಬರುವವರು ಈ ಕ್ಷೇತ್ರದ ಪಾವಿತ್ರ್ಯ ಕಾಪಾಡುವತ್ತ ವಿಶೇಷ ಗಮನ ಹರಿಸಬೇಕು ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಹೇಳಿದರು.

ಆಕ್ಸ್ಫರ್ಡ್ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸೋಮವಾರ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಜೀವನ ವಿಧಾನವನ್ನು, ಆಹಾರ ಪದ್ಧತಿಯನ್ನು ಸಮರ್ಪಕವಾಗಿ ಮಾಡುವ ಮೂಲಕ ಕಾಯಿಲೆಗಳನ್ನು ದೂರ ಮಾಡುವ ಅಗತ್ಯ ಇದೆ ಎಂದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಸಚ್ಚಿದಾನಂದ ಮಾತನಾಡಿ, ಪದವೀಧರರು ಎಂಬಿಬಿಎಸ್ ಪದವಿ ಗಳಿಸಿದ ಹೆಗ್ಗಳಿಕೆ, ಹಣ ಗಳಿಸುವ ಕನಸಿಗೂ ಮಿಗಿಲಾಗಿ, ರೋಗಿಗಳ ಸೇವೆ ಮಾಡುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಸಂಸ್ಥೆಯ ಅಧ್ಯಕ್ಷ ಎಸ್.ಎನ್.ವಿ.ಎಲ್ ನರಸಿಂಹ ರಾಜು ಅವರು ನೂತನ ಪದವೀಧರರನ್ನು ಅಭಿನಂದಿಸಿದರು. ನಿರ್ದೇಶಕ ವೈ.ಶ್ರೀನಿವಾಸುಲು, ಸಲಹೆಗಾರ ಶಿವಬಸವಯ್ಯ, ಪ್ರಾಂಶುಪಾಲ ಡಾ.ಎಂ.ಬಿ.ಸನಿಕೋಪ, ವೈದ್ಯಕೀಯ ಅಧೀಕ್ಷಕ ಡಾ.ಜಿ.ಮೋಹನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.