ಬೆಂಗಳೂರು: ಬೆಂಗಳೂರಿನ ಮಾರತ್ತಳ್ಳಿಯ ಕಾಲೇಜೊಂದರ ವಿದ್ಯಾರ್ಥಿಗಳು ಗುರುವಾರ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದಾರೆ ಎಂಬ ಬಗ್ಗೆ ಸುದ್ದಿಯಾಗಿತ್ತು. ಘೋಷಣೆ ಕೂಗುವ ವಿಡಿಯೊ ಕೆಲ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಪೊಲೀಸರು ದೂರು ದಾಖಲು ಮಾಡುವುದಾಗಿ ಹೇಳಿದ್ದರು.

ಇದೀಗ ಈ ಪ್ರಕರಣದ ಬಗ್ಗೆ ನಟ ಚೇತನ್ ಅಹಿಂಸಾ ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಾರೆ.

‘ನಿನ್ನೆ ನಡೆದ ಕಾಲೇಜು ಫೆಸ್ಟ್ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು 'ಪಾಕಿಸ್ತಾನ್ ಜಿಂದಾಬಾದ್' ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಇದನ್ನು ವಿನೋದಕ್ಕಾಗಿ ಮಾಡಲಾಗಿದೆ. ಈ ಕಾರಣಕ್ಕಾಗಿ ಆರ್ಯನ್, ರಿಯಾ ಮತ್ತು ದಿನಕರ್ ಅವರನ್ನು ಥಳಿಸಿ ಬೆದರಿಸಿ ಮತ್ತು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.ಇದು ಅಸಂಬದ್ಧ ಮತ್ತು ಅಪಾಯಕಾರಿ.ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರು - ನಮ್ಮ ಶತ್ರುಗಳಲ್ಲ.ವಾಕ್ ಸ್ವಾತಂತ್ರ್ಯವನ್ನು ನಾವು ಎತ್ತಿ ಹಿಡಿಯಬೇಕು‘ ಎಂದು ಹೇಳಿದ್ದಾರೆ.

ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆ ವೇಳೆ ಘೋಷಣೆ ಕೂಗಲಾಗಿದೆ. ತಮಾಷೆಗಾಗಿ ಈ ರೀತಿ ಮಾಡಿರುವುದಾಗಿ ವಿದ್ಯಾರ್ಥಿಗಳಾದ ರಿಯಾ, ಆರ್ಯನ್, ದಿನಕರ್ ಹೇಳಿಕೊಂಡಿದ್ದಾರೆ ಎಂದು ವರದಿಯಾಗಿತ್ತು.

ತೆಲುಗಿನ ಗೀತಾ ಆರ್ಟ್ಸ್ ಕಚೇರಿ ಮುಂದೆ ಯುವತಿ ಬೆತ್ತಲೆ ಪ್ರತಿಭಟನೆ!

ವಿಡಿಯೊ ಗಮನಕ್ಕೆ ಬಂದಿದೆ. ದೂರು ದಾಖಲು ಮಾಡುತ್ತೇವೆ ಎಂದು ಪೊಲೀಸರು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.