ಬೆಂಗಳೂರು: ‘ಪಂಚಮಸಾಲಿ ಸಮಾಜಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಹಾಗೂ ಲಿಂಗಾಯತ ಉಪ ಜಾತಿಗಳಿಗೆ ಹಿಂದುಳಿದ ವರ್ಗಗಳ ಮೀಸಲಾತಿಗೆ ಒತ್ತಾಯಿಸಿ ಡಿಸೆಂಬರ್ 10ರ ಬೆಳಿಗ್ಗೆ 10ಕ್ಕೆ ಟ್ರ್ಯಾಕ್ಟರ್ಗಳೊಂದಿಗೆ ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಂಚಮಸಾಲಿಗಳ ನಡಿಗೆ ಬೆಳಗಾವಿ ವಿಧಾನಸೌಧದ ಒಳಗಡೆಗೆ’ ಘೋಷವಾಕ್ಯದ ಅಡಿಯಲ್ಲಿ ಈ ಟ್ರ್ಯಾಕ್ಟರ್ ಚಳವಳಿ ನಡೆಯಲಿದೆ. ಐದು ಸಾವಿರ ಟ್ಯಾಕ್ಟರ್ಗಳೊಂದಿಗೆ 10 ಸಾವಿರ ವಕೀಲರೂ ಸೇರಿದಂತೆ ಸಮುದಾಯದ ಲಕ್ಷಾಂತರ ಮಂದಿ ಈ ಚಳವಳಿಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.

‘ಸಮಾಜದ ಜನಪ್ರತಿನಿಧಿಗಳು ಹಾಗೂ ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು’ ಎಂದು ಅವರು ಮನವಿ ಮಾಡಿದರು.

ಹೋರಾಟ ಸಮಿತಿ ರಾಜ್ಯ ಸಂಚಾಲಕ ಮೈಸೂರಿನ ಮಲ್ಲೇಶ್ ಅಮ್ಮನಪುರ, ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಆನಂದ ಬಿರಾದಾರ, ಪ್ರಧಾನ ಕಾರ್ಯದರ್ಶಿ ಪುಟ್ಟರಾಜ ಹಳ್ಳದ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.