ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ನಡೆಯಲಿರುವ ಫಲಪುಷ್ಪ ಪ್ರದರ್ಶನಕ್ಕೆ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಜ.26ರಂದು ಪೇಪರ್ ಟಿಕೆಟ್ ವಿತರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ(ಬಿಎಂಆರ್‌ಸಿಎಲ್) ನಿರ್ಧರಿಸಿದೆ.

ಅಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆ ತನಕ ಲಾಲ್‌ಬಾಗ್ ಮೆಟ್ರೊ ನಿಲ್ದಾಣದಿಂದ ಯಾವುದೇ ನಿಲ್ದಾಣಕ್ಕೆ ಪ್ರಯಾಣಿಸಲು ₹30 ದರ ನಿಗದಿಪಡಿಸಲಾಗಿದೆ. ಈ ಪೇಪರ್ ಟಿಕೆಟ್ ಒಂದು ದಿನದ ಪ್ರಯಾಣಕ್ಕೆ ಮಾತ್ರ ಸೀಮಿತವಾಗಿದ್ದು, ಅದೇ ದಿನ ಬೆಳಿಗ್ಗೆ 8ರಿಂದ ಸಂಜೆ 6 ಗಂಟೆ ತನಕ ಎಲ್ಲಾ ಮೆಟ್ರೊ ನಿಲ್ದಾಣಗಳಲ್ಲಿ ಖರೀದಿಸಬಹುದಾಗಿದೆ.

ಲಾಲ್‌ಬಾಗ್ ಮೆಟ್ರೊ ನಿಲ್ದಾಣದ ಸ್ವಯಂ ಚಾಲಿತ ಶುಲ್ಕ ಸಂಗ್ರಹಣೆ(ಎಎಫ್‌ಸಿ) ಗೇಟ್‌ನಲ್ಲಿ ಸ್ಕ್ಯಾನ್ ಮಾಡಿ ಪ್ರವೇಶಿಸಬೇಕು. ಪ್ರಯಾಣ ಅಂತ್ಯಗೊಳಿಸುವ ನಿಲ್ದಾಣದಲ್ಲಿನ ಗೇಟ್‌ನಲ್ಲೂ ಸ್ಕ್ಯಾನ್ ಮಾಡಿ ನಿರ್ಗಮಿಸಬಹುದು ಎಂದು ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.