ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ಪೊಲೀಸರು ಪ್ರಾಥಮಿಕ ದೋಷಾರೋಪ ಪಟ್ಟಿ ಸಿದ್ಧಪಡಿಸಿದ್ದಾರೆ.

ದೋಷಾರೋಪ ಪಟ್ಟಿಯನ್ನು ಕಾನೂನು ತಜ್ಞರ ಪರಿಶೀಲನೆಗಾಗಿ ಕಳುಹಿಸಲಾಗಿದ್ದು, ಎರಡು ದಿನಗಳಲ್ಲಿ ಅಂತಿಮಗೊಳ್ಳುವ ನಿರೀಕ್ಷೆಯಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ನೇತೃತ್ವದ ತಂಡವು, ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಲಾದ ಜೈಲು ಅಧಿಕಾರಿಗಳ ವಿರುದ್ಧ ತನಿಖೆಗೆ ಅನುಮತಿ ಕೋರಲಿದೆ.

ಕೊಲೆ ಆರೋಪಿ ದರ್ಶನ್, ರೌಡಿ ಶೀಟರ್ ನಾಗರಾಜ್ ಅಲಿಯಾಸ್ ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಇತರರು ಜೈಲಿನಲ್ಲಿ ಟೀ ಪಾರ್ಟಿ ಮಾಡುತ್ತಿರುವ ಚಿತ್ರ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಅಕ್ರಮಗಳು ಬೆಳಕಿಗೆ ಬಂದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.