ಪೀಣ್ಯ ದಾಸರಹಳ್ಳಿ: ‘ಕೇಂದ್ರ ಸಚಿವರಾಗಿ ಅನುಭವವಿರುವ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಮ್ಮ ಪಕ್ಷ ಕಣಕ್ಕಿಳಿಸಿದೆ. ನಮ್ಮ ಪಕ್ಷ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಸೇರಿ ಅಧಿಕ ಮತಗಳಿಂದ ಅವರನ್ನು ಗೆಲ್ಲಿಸಬೇಕು‘ ಎಂದು ಬಿಜೆಪಿ ಶಾಸಕ ಎಸ್. ಮುನಿರಾಜು ತಿಳಿಸಿದರು.

ಶೆಟ್ಟಿಹಳ್ಳಿ ವಾರ್ಡ್ ಬಿಜೆಪಿ ಅಧ್ಯಕ್ಷ ಬಿ. ಸುರೇಶ್ ನೇತೃತ್ವದಲ್ಲಿ ಆಯೋಜಿಸಲಾದ ಮನೆ ಮನೆಗೆ ಪ್ರಚಾರ ಕಾರ್ಯಕ್ಕೆ, ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು.

‘ನಮ್ಮ ಕಾರ್ಯಕರ್ತರು ಬೆಳಿಗ್ಗೆ ಎರಡು ಗಂಟೆ ಮತ್ತು ಸಂಜೆ ಮೂರು ಗಂಟೆ ಮನೆ ಮನೆಗೆ ತೆರಳಿ ಪ್ರಚಾರ ಮಾಡಬೇಕು. ದೇಶದ ಅಭಿವೃದ್ಧಿ ಮತ್ತು ಭದ್ರತೆಗೋಸ್ಕರ ಎನ್ ಡಿಎ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಬರಬೇಕು' ಎಂದರು.

ಇದೇ ವೇಳೆ ಶಾಸಕ ಎಸ್. ಮುನಿರಾಜು ಅವರು ಮಲ್ಲಸಂದ್ರ ವಾರ್ಡ್‌ನ ಆಂಜನೇಯ ದೇವಸ್ಥಾನ, ಬಾಗಲಗುಂಟೆ ವಾರ್ಡ್ ಮಾರಮ್ಮ ದೇವಿ ದೇವಸ್ಥಾನ ಮತ್ತು ದಾಸರಹಳ್ಳಿ ಉಮಾ ಮಹೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮನೆ ಮನೆ ಪ್ರಚಾರಕ್ಕೆ ಚಾಲನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.