ಬೆಂಗಳೂರು: ಗಣೇಶ ಹಬ್ಬಕ್ಕೆ ಜನರು ಊರಿಗೆ ಹೊರಟಿದ್ದರಿಂದ ನಗರದ ಪ್ರಮುಖ ಮಾರ್ಗಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೂ ವಾಹನ ದಟ್ಟಣೆ ತೀವ್ರವಾಗಿತ್ತು. ಇದರಿಂದ ವಾಹನ ಸವಾರರು ಹೈರಾಣಾದರು. ರಾತ್ರಿ ದಟ್ಟಣೆ ಸಮಸ್ಯೆ ತೀವ್ರವಾಗಿತ್ತು.

ತುಮಕೂರು ರಸ್ತೆ, ಮೈಸೂರು ರಸ್ತೆ, ಬಳ್ಳಾರಿ ರಸ್ತೆಯಲ್ಲಿ ವಿಪರೀತ ದಟ್ಟಣೆ ಕಂಡುಬಂತು. ನೆಲಮಂಗಲದ ಟೋಲ್ ಬಳಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಟೋಲ್ ದಾಟಲು ಸಾಕಷ್ಟು ಸಮಯ ಹಿಡಿಯಿತು ಎಂದು ಸವಾರರು ನೋವು ತೋಡಿಕೊಂಡರು.

ಟಿ.ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ, ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿ ಉದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮೈಸೂರು ರಸ್ತೆಯಲ್ಲೂ ವಾಹನಗಳ ಸಾಲಾಗಿ ನಿಂತಿದ್ದು ಕಂಡುಬಂತು.

ಶುಕ್ರವಾರ ದಿನವಿಡೀ ಪೀಣ್ಯ ಇಂಡಸ್ಟ್ರಿಯ ಮೆಟ್ರೊ ನಿಲ್ದಾಣದಿಂದ ನಾಗಸಂದ್ರದವರೆಗೂ ಮೆಟ್ರೊ ಸಂಚಾರ ಇರಲಿಲ್ಲ. ಎಲೆಕ್ಟ್ರಿಕ್ ಸಿಗ್ನಲ್ ಪರೀಕ್ಷೆಗೆಂದು ಮೆಟ್ರೊ ರೈಲು ಸೇವೆ ಸ್ಥಗಿತ ಮಾಡಲಾಗಿತ್ತು. ಇದರಿಂದ ಪ್ರಯಾಣಿಕರು ಮತ್ತಷ್ಟು ಸಮಸ್ಯೆಗೆ ಸಿಲುಕಿದ್ದರು. ಕೆಂಪೇಗೌಡ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೂ ಬಸ್ ಏರಲು ನೂಕುನುಗ್ಗಲು ಇತ್ತು.

ರಿಚ್ಮಂಡ್ ವೃತ್ತ, ಆನಂದರಾವ್ ವೃತ್ತ, ಕಾರ್ಪೊರೇಷನ್ ವೃತ್ತ, ರೆಸಿಡೆನ್ಸಿ ರಸ್ತೆ, ಮೆಜೆಸ್ಟಿಕ್, ಕೆ.ಆರ್.ವೃತ್ತ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ದಟ್ಟಣೆ ಕಂಡುಬಂತು. ದಟ್ಟಣೆಯಲ್ಲಿ ಸಿಲುಕಿ ಜನರು ಸುಸ್ತಾದರು. ಹಬ್ಬದ ಖರೀದಿಗಾಗಿ ಚಿಕ್ಕಪೇಟೆ ಹಾಗೂ ಕೆಆರ್ ಮಾರುಕಟ್ಟೆಗೆ ಅಪಾರ ಸಂಖ್ಯೆಯಲ್ಲಿ ಗ್ರಾಹಕರು ಬಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.