ಬೆಂಗಳೂರು: ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ 14 ರೈಲು ನಿಲ್ದಾಣಗಳಲ್ಲಿ ದೇಶ ವಿಭಜನೆಯ ಕರಾಳತೆಯನ್ನು ಬಿಂಬಿಸುವ ಛಾಯಾಚಿತ್ರ ಪ್ರದರ್ಶನವನ್ನು ಬುಧವಾರ ಏರ್ಪಡಿಸಲಾಗಿತ್ತು.

ಕಳೆದ ಶತಮಾನದಲ್ಲಿ ಘಟಿಸಿದ ಬಹು ದೊಡ್ಡ ಪ್ರಮಾಣದ ಮಾನವ ಸ್ಥಳಾಂತರ ಮತ್ತು ಅದರಿಂದ ಉಂಟಾದ ಅಪಾರ ಸಾವು-ನೋವುಗಳನ್ನು ಪ್ರತಿಬಿಂಬಿಸುವ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಯಿತು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದ ಛಾಯಾಚಿತ್ರ ಪ್ರದರ್ಶನದಲ್ಲಿ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್‌ಪುರಿಯಾ, ವಿಭಾಗೀಯ ಸಿಬ್ಬಂದಿ ಅಧಿಕಾರಿಗಳಾದ ಉಮಾ ಶರ್ಮಾ, ವೆಂಕಟೇಶ ನಾಯಕ್ ಭಾಗವಹಿಸಿದ್ದರು.

ಬೆಂಗಳೂರು ವಿಭಾಗದಲ್ಲಿ ಒಟ್ಟು 14 ರೈಲು ನಿಲ್ದಾಣಗಳಲ್ಲಿ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿತ್ತು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.