ಬೆಂಗಳೂರು: ‘ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವನ್ನು ₹ 150 ಕೋಟಿ ವೆಚ್ಚದಲ್ಲಿ ವಿಶ್ವದರ್ಜೆಯ ಕ್ಯಾಂಪಸ್ ಆಗಿ ಅಭಿವೃದ್ಧಿಪಡಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಅಭಿವೃದ್ಧಿ ಕುರಿತ ಪರಿಶೀಲನಾ ಸಭೆಯಲ್ಲಿ ಬುಧವಾರ ಪಾಲ್ಗೊಂಡು ಮಾತನಾಡಿದರು.

ಕುಲಪತಿ ಪ್ರೊ.ಎಸ್.ಜಾಫೆಟ್ ನೇತೃತ್ವದ ತಂಡ ಪ್ರಸ್ತುತ ಪಡಿಸಿದ ಬೆಂಗಳೂರು ಕೇಂದ್ರ ವಿವಿಯ ಅಭಿವೃದ್ಧಿ ಕಾರ್ಯಗಳ ಕುರಿತ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

‘ಆದಷ್ಟು ಬೇಗ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗುವುದು. 31 ಎಕರೆ ಇದ್ದು, ಅಲ್ಲಿ ಶೈಕ್ಷಣಿಕ ಹಾಗೂ ಕ್ರೀಡಾ ಸಮುಚ್ಚಯಗಳ ನಿರ್ಮಾಣ ಮಾಡಲಾಗುವುದು. ಮೊದಲ ಹಂತದಲ್ಲಿ ಅಭಿವೃದ್ಧಿಪಡಿಸಲಾಗುವ ಶೈಕ್ಷಣಿಕ ಘಟಕ, ಐತಿಹಾಸಿಕ ಕಟ್ಟಡಗಳ ನವೀಕರಣಕ್ಕೆ ₹ 100 ಕೋಟಿ ಹಾಗೂ ಕ್ರೀಡಾ ಸೌಲಭ್ಯಕ್ಕೆ ₹ 50 ಕೋಟಿ ಮೀಸಲಿಡಲಾಗುವುದು. 18 ತಿಂಗಳಲ್ಲಿ ಯೋಜನೆ ಪೂರ್ಣಗೊಳಿಸಲು ಸೂಚಿಸಲಾಗಿದೆ’ ಎಂದು ಅವರು ತಿಳಿಸಿದರು.

ಕ್ರೀಡಾ ಸೌಕರ್ಯ: ‘ಕ್ರೀಡೆಗೂ ವಿಶ್ವವಿದ್ಯಾಲಯದಲ್ಲಿ ಒತ್ತು ನೀಡಲಾಗುವುದು. ಅದಕ್ಕಾಗಿಯೇ ವಿಶ್ವವಿದ್ಯಾಲಯದಲ್ಲಿ ಪ್ರತ್ಯೇಕ ಕ್ರೀಡಾ ಘಟಕ ನಿರ್ಮಿಸಿ ಅಲ್ಲಿ ಮಲ್ಟಿ ಗೇಮ್ ಕ್ರೀಡಾಂಗಣದ ಸೌಕರ್ಯ ಒದಗಿಸಲಾಗುವುದು. 400 ಮೀಟರ್ ಟ್ರ್ಯಾಕ್ ಸಹ ಅಲ್ಲಿರಲಿದೆ. ಜತೆಗೆ, ಕ್ಯಾಂಪಸ್ ಸುತ್ತ ವಾಕಿಂಗ್ ಪಾತ್ ನಿರ್ಮಿಸಲಾಗುವುದು’ ಎಂದು ವಿವರಿಸಿದರು.

ಪರಿಸರ ಸ್ನೇಹಿ: ಮಳೆ ನೀರು ಸಂಗ್ರಹಕ್ಕೆ 5 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ ನಿರ್ಮಿಸಲಾಗುವುದು. ನೀರನ್ನು ಶೇಕಡ 100ರಷ್ಟು ಪುನರ್‌ಬಳಕೆ ಮಾಡಲಾಗುವುದು. 125 ಕಿ.ಲೋ ವಾಟ್ ಸಾಮರ್ಥ್ಯದ ಸೌರ ಶಕ್ತಿ ಉತ್ಪಾದನಾ ಘಟಕ ಸ್ಥಾಪಿಸಲಾಗುವುದು ಎಂದರು.

ಇ-ಆಡಳಿತಕ್ಕೆ ಒತ್ತು

‘ವಿಶ್ವವಿದ್ಯಾಲಯದ ಆಡಳಿತ ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಎಲ್ಲವೂ ಆನ್‌ಲೈನ್‌ನಲ್ಲಿರಬೇಕು. ಸರ್ಕಾರದ ಜತೆಗೆ ಆನ್‌ಲೈನ್‌ನಲ್ಲೇ ವ್ಯವಹರಿಸಲು ಸೂಚಿಸಲಾಗಿದೆ. ಈಗಿನಿಂದಲೇ ನವೀನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಬೋಧನಾ ವಿಧಾನವನ್ನೂ ರೂಢಿಸಿಕೊಳ್ಳಬೇಕು’ ಎಂದು ಸಚಿವ ಅಶ್ವತ್ಥನಾರಾಯಣ ಹೇಳಿದರು.

ಸದ್ಯ ವಿಶ್ವವಿದ್ಯಾಲಯದಲ್ಲಿ 800 ವಿದ್ಯಾರ್ಥಿಗಳಿಂದ ವ್ಯಾಸಂಗ ಮಾಡುತ್ತಿದ್ದಾರೆ.50,000 ವಿದ್ಯಾರ್ಥಿಗಳು ಓದಲು ಅವಕಾಶ ಕಲ್ಪಿಸುವ ಗುರಿ ಹೊಂದಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.