ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಬುಧವಾರ) ಬೆಂಗಳೂರಿನಲ್ಲಿ ನಡೆಯುತ್ತಿರುವ 'ಇನ್ವೆಸ್ಟ್ ಕರ್ನಾಟಕ 2022: ಜಾಗತಿಕ ಹೂಡಿಕೆದಾರರ ಸಮಾವೇಶ' ಕಾರ್ಯಕ್ರಮಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಮಾತನಾಡಲಿದ್ದಾರೆ.

ನವೆಂಬರ್ 4ರ ವರೆಗೆ, ಮೂರು ದಿನಗಳ ಕಾಲ ನಡೆಯಲಿರುವ ಸಮಾವೇಶದಲ್ಲಿ 80ಕ್ಕೂ ಹೆಚ್ಚು ಸಂವಾದ ಗೋಷ್ಠಿಗಳು ನಡೆಯಲಿವೆ. ಹೂಡಿಕೆದಾರರನ್ನು ಸೆಳೆಯುವ ಮತ್ತು ಮುಂದಿನ ದಶಕದಲ್ಲಿ ಮಾಡಬಹುದಾದ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಿರ್ಧರಿಸಲು ಈ ಸಮಾವೇಶ ನಡೆಯುತ್ತಿದೆ.

ಕುಮಾರ್ ಮಂಗಲಮ್ ಬಿರ್ಲಾ, ಸಜ್ಜನ್ ಜಿಂದಾಲ್ ಮತ್ತು ವಿಕ್ರಮ್ ಕಿರ್ಲೋಸ್ಕರ್ ಸೇರಿದಂತೆ ಅನೇಕ ಪ್ರಮುಖ ಉದ್ಯಮಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.