ಬೆಂಗಳೂರು: ಕಾಡುಗೋಡಿ ಟ್ರೀ–ಪಾರ್ಕ್ ಮೆಟ್ರೊ ನಿಲ್ದಾಣದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಮೂವರು ಆರೋಪಿಗಳನ್ನು ಕಾಡುಗೋಡಿ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಮೊಹ್ಮದ್ ಇದ್ರೀಸ್ (30), ಶ್ರೀಶೈಲ (28), ಮಡಿವಾಳಪ್ಪ (27) ಬಂಧಿತರು. ಮತ್ತೊಬ್ಬ ಆರೋಪಿ ವೀರೇಶ್(30) ಎಂಬಾತ ತಲೆಮರೆಸಿಕೊಂಡಿದ್ದು ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

‘ಮೆಟ್ರೊ ನಿಲ್ದಾಣದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಿ ಭದ್ರತಾ ಸಿಬ್ಬಂದಿಯ ಉಸ್ತುವಾರಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು. ಮೆಟ್ರೊ ನಿಲ್ದಾಣದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಗಲಾಟೆಯ ದೃಶ್ಯ ಸೆರೆಯಾಗಿತ್ತು’ ಎಂದು ಪೊಲೀಸರು ತಿಳಿಸಿದರು.

ಮದ್ಯದ ಅಮಲಿನಲ್ಲಿ ನಾಲ್ವರು ಮೆಟ್ರೊ ನಿಲ್ದಾಣಕ್ಕೆ ಬಂದಿದ್ದರು. ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿ ಅವರನ್ನು ತಡೆದಿದ್ದರು. ಇದರಿಂದ ಕುಪಿತಗೊಂಡ ಆರೋಪಿಗಳು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.