ಬೆಂಗಳೂರು: ಸದಸ್ಯರಲ್ಲದವರಿಗೆ ಪ್ರವೇಶ ನೀಡಿ ಅಕ್ರಮವಾಗಿ ಜೂಜು ಆಡಿಸುತ್ತಿದ್ದ ಕ್ಲಬ್ಗಳ ಮೇಲೆ ಪಶ್ಚಿಮ ವಿಭಾಗದ ಪೊಲೀಸರು ದಾಳಿ ಮಾಡಿದ್ದು, 95 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

‘ಅಗ್ರಹಾರ ದಾಸರಹಳ್ಳಿಯಲ್ಲಿರುವ ಸಿಲಿಕಾನ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಇನ್ಸ್ಟಿಟ್ಯೂಟ್ ಕ್ಲಬ್ ಹಾಗೂ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ಅಸೋಸಿಯೇಷನ್ ಕ್ಲಬ್ ಮೇಲೆ ದಾಳಿ ಮಾಡಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ತಿಳಿಸಿದರು.

‘ಜೂಜಾಟದಲ್ಲಿ ತೊಡಗಿದ್ದ 95 ಮಂದಿಯನ್ನು ವಶಕ್ಕೆ ಪಡೆದು, ಅವರಿಂದ ₹ 2.50 ಲಕ್ಷ ಜಪ್ತಿ ಮಾಡಲಾಗಿದೆ. ಬಹುತೇಕರು, ಕ್ಲಬ್ ಸದಸ್ಯರಲ್ಲ. ಅಕ್ರಮವಾಗಿ ಕ್ಲಬ್ಗೆ ಬಂದು ಜೂಜು ಆಡುತ್ತಿದ್ದರು. ಕ್ಲಬ್ ಆಡಳಿತ ಮಂಡಳಿ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.