ಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ವ್ಯಕ್ತಿಗಳ ಮನೆಗಳಲ್ಲಿ ಪಶ್ಚಿಮ ವಿಭಾಗದ ಪೊಲೀಸರು ಗುರುವಾರ ರಾತ್ರಿ ಪರಿಶೀಲನೆ ನಡೆಸಿದರು.

ಪಾದರಾಯನಪುರ, ಅರ್ಫತ್ ನಗರ, ವಿ.ಎಸ್. ಗಾರ್ಡನ್, ಜನತಾ ಕಾಲೊನಿ, ಹಳೇ ಗುಡ್ಡದಹಳ್ಳಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಸುಲಿಗೆ, ಕೊಲೆ ಯತ್ನ, ಜೀವ ಬೆದರಿಕೆ ಸೇರಿದಂತೆ ಹಲವು ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳು, ಜೈಲಿಗೂ ಹೋಗಿ ಬಂದಿದ್ದರು. ಅವರ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು.

‘ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದ ಕೆಲವರು, ಪುನಃ ಕೃತ್ಯದಲ್ಲಿ ತೊಡಗುತ್ತಿದ್ದ ಬಗ್ಗೆ ಮಾಹಿತಿ ಇತ್ತು. ಅಂಥವರ ಪಟ್ಟಿ
ಸಿದ್ಧಪಡಿಸಿ ಮನೆಗಳಲ್ಲಿ ಪರಿಶೀಲನೆ ನಡೆಸಲಾಯಿತು’ ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.