ಬೆಂಗಳೂರು: ಪೊಲೀಸ್ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳನ್ನು ಬಗೆಹರಿಸಲು ಇದೇ 6ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ಕರೆದಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ವೇತನ ಪರಿಷ್ಕರಣೆ ಜಾರಿಯನ್ನು ತಾಂತ್ರಿಕ ಕಾರಣಗಳಿಗಾಗಿ ತಡೆ ಹಿಡಿಯಲಾಗಿತ್ತು ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಪೊಲೀಸರ ವೇತನ ನಿಗದಿಪಡಿಸುವಲ್ಲಿ ಕೆಲವೊಂದು ವ್ಯತ್ಯಾಸಗಳಾಗಿರುವ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಪರಿಶೀಲನೆಗೆ ಕಳುಹಿಸಲಾಗಿತ್ತು. ವರದಿ ಜಾರಿ ಮಾಡುವ ಸಂಬಂಧ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ನೆರೆ ಪರಿಹಾರಕ್ಕೆ ಈ ವಾರವೇ ಹಣ ಬಿಡುಗಡೆ ಆಗಲಿದೆ. ರಾಜ್ಯ ಸರ್ಕಾರ ಕಳುಹಿಸಿದ ವರದಿಗೂ ಕೇಂದ್ರ ಅಧ್ಯಯನ ತಂಡ ನೀಡಿರುವ ವರದಿಗೂ ವ್ಯತ್ಯಾಸ ಇರಬಹುದು. ಕೇಂದ್ರ ಸ್ಪಷ್ಟೀಕರಣ ಕೇಳುವುದರಲ್ಲಿ ತಪ್ಪಿಲ್ಲ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.