ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಬುದ್ಧಾ ಕೊಲೆ: ಸಿಐಡಿ ತನಿಖೆ ಪ್ರಾರಂಭ

Published 3 ಜುಲೈ 2024, 16:26 IST
Last Updated 3 ಜುಲೈ 2024, 16:26 IST
ಅಕ್ಷರ ಗಾತ್ರ

ಬೆಂಗಳೂರು: ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಆರ್. ಪ್ರಬುದ್ಧಾ (20) ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಪ್ರಾರಂಭಿಸಿದ್ದಾರೆ. ಮಂಗಳವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.

‘ಸಿಐಡಿ ಎಸ್‌ಪಿ ವೆಂಕಟೇಶ್‌ ಅವರ ನೇತೃತ್ವದಲ್ಲಿ ಅಧಿಕಾರಿಗಳು ಬೃಂದಾವನ ಲೇಔಟ್‌ನ ಪ್ರಬುದ್ಧಾ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಪ್ರಬುದ್ಧಾ ತಾಯಿ ಸಾಮಾಜಿಕ ಕಾರ್ಯಕರ್ತೆ ಕೆ.ಆರ್‌. ಸೌಮ್ಯಾ ಸೇರಿ ಹಲವರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ’ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಸಾಮಾಜಿಕ ಕಾರ್ಯಕರ್ತೆ ಕೆ.ಆರ್.ಸೌಮ್ಯಾ ಅವರು ತಮ್ಮ ಮಗಳ ಸಾವಿನ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲು ಕೋರಿ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದರು.

ಸಿದ್ದರಾಮಯ್ಯ ಅವರು ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದರು. ಅದರಂತೆ ಸಿಐಡಿ ಅಧಿಕಾರಿಗಳು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರಿಂದ ಪ್ರಕರಣದ ವರ್ಗಾವಣೆ ಪಡೆದು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT