ಬೆಂಗಳೂರು: 'ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿದ್ದು, ಈ ಬಗ್ಗೆ ಪಕ್ಷದವರೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ' ಎಂದು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಹೇಳಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ ಮಾತನಾಡಿದ ಅವರು, 'ಬಿಜೆಪಿ ಗೆಲುವಿಗೆ ಕಾರಣವೇನು ಎಂಬುದನ್ನು ಆ ಪಕ್ಷದವರೇ ಹೇಳಬೇಕು. ನಾವು ಜಾತಿ, ಧರ್ಮದ ಮೇಲೆ ಚುನಾವಣೆ ಮಾಡಲಿಲ್ಲ' ಎಂದು ಬಿಜೆಪಿಗೆ ಟಾಂಗ್ ನೀಡಿದರು.

'ಹೀನಾಯ ಸೋಲಿನಿಂದ ಮೈತ್ರಿ ಸರ್ಕಾರ ಉರುಳುತ್ತೋ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ. ಆ ಮೈತ್ರಿ ಸರ್ಕಾರ ಮಾಡಿದ ಆ ಇಬ್ಬರನ್ನೇ ನೀವು ಕೇಳಬೇಕು' ಎಂದು ಮೈತ್ರಿ ಸರ್ಕಾರದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

'ಸಣ್ಣ ವಯಸ್ಸಿನಲ್ಲೇ ಸಂಸದರಾಗಿ ಆಯ್ಕೆ ಆಗುತ್ತಿರುವ ತೇಜಸ್ವಿ ಸೂರ್ಯ ಅವರಿಗೆ ಒಳ್ಳೆಯದಾಗಲಿ' ಎಂದು ಹಾರೈಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.