ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣ | ಅಸಲಿ ವಿಡಿಯೊ: ಮಾಹಿತಿ ನೀಡದ ಸಂಸದ ಪ್ರಜ್ವಲ್ ರೇವಣ್ಣ

ಭವಾನಿ ರೇವಣ್ಣ ಪತ್ತೆಗೆ ಮುಂದುವರಿದ ಶೋಧ: ಲುಕ್‌ಔಟ್ ಸಾಧ್ಯತೆ
Published : 3 ಜೂನ್ 2024, 23:53 IST
Last Updated : 3 ಜೂನ್ 2024, 23:53 IST
ಫಾಲೋ ಮಾಡಿ
Comments
ಭವಾನಿಗಾಗಿ ಹುಡುಕಾಟ, ಸಿಗದ ಸುಳಿವು
‘ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ’ ಎನ್ನಲಾದ ಭವಾನಿ ರೇವಣ್ಣ ಅವರ ಪತ್ತೆಗಾಗಿ ಎಸ್‌ಐಟಿ ಅಧಿಕಾರಿಗಳು ಶೋಧ ಮುಂದು ವರಿಸಿದ್ದಾರೆ. ಹಾಸನ, ಮಂಡ್ಯ, ಮೈಸೂರು ಹಾಗೂ ಬೆಂಗಳೂರಿನ ಹಲವು ಸ್ಥಳಗಳಿಗೆ ತೆರಳಿದ್ದ ಅಧಿಕಾರಿಗಳಿಗೆ ಸದ್ಯಕ್ಕೆ ಯಾವುದೇ ಸುಳಿವು ಸಿಕ್ಕಿಲ್ಲ. ‘ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಅವರು ವಿಚಾರಣೆಗೆ ಬಂದಿಲ್ಲ. ಈಗ ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಅವರ ಸುಳಿವು ಸಿಗದಿದ್ದರೆ, ಕಾನೂನು ತಜ್ಞರ ಜೊತೆ ಚರ್ಚಿಸಿ ಲುಕ್‌ಔಟ್ ನೋಟಿಸ್ ಹೊರಡಿಸುವ ಸಂಬಂಧ ಚರ್ಚಿಸ ಲಾಗುವುದು’ ಎಂದು ಎಸ್‌ಐಟಿ ಮೂಲಗಳು ಹೇಳಿವೆ.
ಪ್ರಯೋಗಾಲಯಕ್ಕೆ ಮೊಬೈಲ್
‘ಪ್ರಜ್ವಲ್ ರೇವಣ್ಣ ಅವರ ಬಳಿ ಸಿಕ್ಕಿರುವ ಮೊಬೈಲ್ ಹಾಗೂ ಇತರೆ ತಾಂತ್ರಿಕ ಪುರಾವೆಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದರ ವರದಿಗಾಗಿ ಕಾಯುತ್ತಿದ್ದೇವೆ. ವಿಡಿಯೊ ಅಳಿಸಿ ಹಾಕಿರುವುದು ಕಂಡುಬಂದರೆ, ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
ಜಾಮೀನಿಗಾಗಿ ಹೈಕೋರ್ಟ್‌ಗೆ ಭವಾನಿ
ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿನ ಸಂತ್ರಸ್ತೆಯೊಬ್ಬರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ, ಪ್ರಜ್ವಲ್ ತಾಯಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.ಈ ಕುರಿತ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಸೆಷನ್ಸ್‌ ನ್ಯಾಯಾಲಯ ತಿರಸ್ಕರಿಸಿರುವ ಕಾರಣ ಭವಾನಿ ಈಗ ಹೈಕೋರ್ಟ್‌ ಮೊರೆ ಹೊಕ್ಕಿದ್ದಾರೆ. ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT