ಶನಿವಾರ, 29 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜ್ವಲ್ ರೇವಣ್ಣ ಮರಳಿ ಜೈಲಿಗೆ: 14 ದಿನಗಳ ಕಾಲ ನ್ಯಾಯಾಂಗ ಬಂಧನ

Published 18 ಜೂನ್ 2024, 16:04 IST
Last Updated 18 ಜೂನ್ 2024, 16:04 IST
ಅಕ್ಷರ ಗಾತ್ರ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಅವರು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದರು.

ಎರಡನೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ಕೆ.ಎನ್.ಶಿವಕುಮಾರ್ ಅವರು ಜೂನ್ 13ರಿಂದ 18ರ ವರೆಗೆ ಎಸ್ಐಟಿ ಕಸ್ಟಡಿಗೆ ನೀಡಿದ್ದರು. ಎಸ್ಐಟಿ ಕಸ್ಟಡಿ ಅವಧಿ ಅಂತ್ಯವಾಗಿದ್ದರಿಂದ ಪ್ರಜ್ವಲ್‌ ಅವರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಪ್ರಜ್ವಲ್ ವಿರುದ್ಧ ಮೂರು ಪ್ರತ್ಯೇಕ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಅವರನ್ನು ಮೊದಲನೇ ಪ್ರಕರಣದಲ್ಲಿ ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಎರಡನೇ ಪ್ರಕರಣದಲ್ಲಿ ವಿಚಾರಣೆಗಾಗಿ ಅವರನ್ನು ಜೂನ್‌ 12ರಂದು ಬಾಡಿ ವಾರಂಟ್ ಮೇಲೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಎಸ್ಐಟಿ ವಶಕ್ಕೆ ಪಡೆದುಕೊಂಡಿತ್ತು. ಮೇ 31ರಂದು ಪ್ರಜ್ವಲ್ ರೇವಣ್ಣ ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT