ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷತೆಯ ಗಾದಿಯು ಮಹಿಳೆಯರಿಗೆ ಒಲಿಯುವ ಸಾಧ್ಯತೆ ಹೆಚ್ಚಿದೆ.

ಡಿಸೆಂಬರ್ 20, 21 ಹಾಗೂ 22ರಂದು ಸಮ್ಮೇಳನ ನಡೆಯಲಿದೆ. ಸಮ್ಮೇಳನಾಧ್ಯಕ್ಷತೆಗೆ ಸಂಬಂಧಿಸಿದಂತೆ ಸಾಹಿತ್ಯೇತರರ ಆಯ್ಕೆಯ ಚರ್ಚೆಯು ವಿವಾದದ ಸ್ವರೂಪ ತಾಳಿತ್ತು. ಈ ಬಾರಿ ಸಾಹಿತ್ಯ ಕ್ಷೇತ್ರದವರನ್ನು ಬಿಟ್ಟು, ರಾಜಕಾರಣಿಗಳು, ಮಠಾಧೀಶರು, ಹೋರಾಟಗಾರರನ್ನು ಅಧ್ಯಕ್ಷ ಗಾದಿಗೆ ಕೂರಿಸುವ ಯತ್ನವೂ ನಡೆದಿತ್ತು. ಪರಿಷತ್ತಿನ ನಡೆಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತಂತಿರುವ, ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಸಾಹಿತಿಗಳನ್ನೇ ಆಯ್ಕೆ ಮಾಡುವ ಮೂಲಕ ಸಮ್ಮೇಳನದ ಪರಂಪರೆಯನ್ನು ಮುಂದುವರಿಸಲು ನಿರ್ಧರಿಸಿದೆ. ಅದರಲ್ಲೂ ಮಹಿಳಾ ಸಾಹಿತಿಗಳಿಗೆ ಅಧ್ಯಕ್ಷ ಸ್ಥಾನ ನೀಡಲು ಮುಂದಾಗಿದೆ.

ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲಿ ಈವರೆಗೆ ನಾಲ್ವರು ಮಹಿಳೆಯರಿಗೆ ಮಾತ್ರ ಸಮ್ಮೇಳನಾಧ್ಯಕ್ಷತೆ ಒಲಿದು ಬಂದಿತ್ತು. ಮಹಿಳೆಯರನ್ನು ಕಡೆಗಣಿಸಲಾಗುತ್ತಿದೆ ಎಂಬ ಅಸಮಾಧಾನವೂ ಸಾಹಿತ್ಯ ವಲಯದಲ್ಲಿತ್ತು. ಈ ಬಾರಿ ಸಮ್ಮೇಳನಾಧ್ಯಕ್ಷರ ಆಯ್ಕೆಯ ವಿಧಾನ ವಿವಾದಕ್ಕೆ ತಿರುಗಿದಾಗ, ಕಸಾಪ ನಿಲುವನ್ನು ಪ್ರಶ್ನಿಸಿದ ಬಹುತೇಕರು ಮಹಿಳೆಯರನ್ನೇ ಆಯ್ಕೆ ಮಾಡಬೇಕು ಎಂದೂ ಪ್ರತಿಪಾದಿಸಿದ್ದರು. ಅದಕ್ಕೆ, ಪರಿಷತ್ತು ಮಣಿದಂತಿದೆ.

ಕಸಾಪ ಮೂಲಗಳ ಪ್ರಕಾರ, ವೀಣಾ ಶಾಂತೇಶ್ವರ, ವೈದೇಹಿ ಹಾಗೂ ಮಾಲತಿ ಪಟ್ಟಣಶೆಟ್ಟಿ ಅವರ ಹೆಸರು ಸಮ್ಮೇಳನಾಧ್ಯಕ್ಷತೆಗೆ ಮುಂಚೂಣಿಯಲ್ಲಿವೆ. ವಿಜಯಾ, ಲತಾ ರಾಜಶೇಖರ್, ಬಿ.ಟಿ. ಲಲಿತಾ ನಾಯಕ್ ಅವರ ಹೆಸರುಗಳೂ ಈ ಸಾಲಿನಲ್ಲಿ ಸೇರಿವೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯವರಾದ ಲತಾ ರಾಜಶೇಖರ್ ಅವರು ಮೈಸೂರಿನಲ್ಲಿ ನೆಲೆಸಿದ್ದಾರೆ. ಮಂಡ್ಯದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಅವರನ್ನೇ ಅಧ್ಯಕ್ಷರಾಗಿ ಮಾಡಬೇಕು ಎಂದು ಕೆಲವು ಪ್ರಭಾವಿ ರಾಜಕಾರಣಿಗಳು ಒತ್ತಡ ಹೇರುತ್ತಿದ್ದಾರೆ ಎಂದೂ ಹೇಳಲಾಗುತ್ತಿದೆ.

ಧಾರವಾಡ ನಿವಾಸಿಯಾಗಿರುವ ಕತೆ ಹಾಗೂ ಕಾದಂಬರಿಕಾರ್ತಿ ವೀಣಾ ಶಾಂತೇಶ್ವರ ಅವರು ಸಮ್ಮೇಳನಾಧ್ಯಕ್ಷರಾಗುವ ಸಾಧ್ಯತೆಗಳು ಹೆಚ್ಚಿವೆ. ಮಂಡ್ಯದಲ್ಲಿ ಸಮ್ಮೇಳನ ನಡೆಯುತ್ತಿರುವುದರಿಂದ, ಉತ್ತರ ಕರ್ನಾಟಕದ ಭಾಗದವರಿಗೆ ಆದ್ಯತೆ ನೀಡಿದಂತಾಗುತ್ತದೆ ಎಂಬ ಲೆಕ್ಕಾಚಾರವೂ ಇದೆ.

1974ರಲ್ಲಿ ಮಂಡ್ಯದಲ್ಲಿ ನಡೆದ 48ನೇ ಸಾಹಿತ್ಯ ಸಮ್ಮೇಳನದಲ್ಲಿ ಜಯದೇವಿತಾಯಿ ಲಿಗಾಡೆ ಅವರು ಸಮ್ಮೇಳನಾಧ್ಯಕ್ಷರಾಗಿದ್ದರು. ಮೂರನೇ ಬಾರಿ ಮಂಡ್ಯ ಸಮ್ಮೇಳನದ ಆತಿಥ್ಯ ವಹಿಸಿದ್ದು, 30 ವರ್ಷಗಳ ಬಳಿಕ ಅಲ್ಲಿ ಸಮ್ಮೇಳನ ನಡೆಯುತ್ತಿದೆ.

28ಕ್ಕೆ ಕಾರ್ಯಕಾರಿ ಸಮಿತಿ ಸಭೆ ಸಮ್ಮೇಳನಾಧ್ಯಕ್ಷರ ಆಯ್ಕೆಯ ಚರ್ಚೆಗೆ ಸಂಬಂಧಿಸಿದಂತೆ ಕಸಾಪ ತುರ್ತಾಗಿ ಇದೇ 28ರಂದು ಕಾರ್ಯಕಾರಿ ಸಮಿತಿ ಸಭೆ ಕರೆದಿದೆ. ಈ ಮೊದಲು ನ.12ರಂದು ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿತ್ತು. 28ರಂದು ಕಾರ್ಯಕಾರಿ ಸಮಿತಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿ ಇನ್ನೊಂದು ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಪರಿಷತ್ತಿನ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.