ಬೆಂಗಳೂರು: ‘ರಸ್ತೆ ನಿರ್ಮಾಣಕ್ಕೆ ಕುಂಬಳಗೋಡಿನವಿಶ್ವಕಲ್ಯಾಣ ಮಿಷನ್ ಚಾರಿಟಬಲ್ ಟ್ರಸ್ಟ್ ಒಡೆತನದ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಇದರ ಪರಿಹಾರದ ಹಣ ನೀಡಬೇಕು ಹಾಗೂ ಆಶ್ರಮದ ಆವರಣದಲ್ಲಿ 112 ಅಡಿ ಎತ್ತರದ ಬಸವಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಸರ್ಕಾರ ₹25 ಕೋಟಿ ಅನುದಾನ ನೀಡಬೇಕು’ ಎಂದುವಿಶ್ವಕಲ್ಯಾಣ ಮಿಷನ್ ಚಾರಿಟಬಲ್ ಟ್ರಸ್ಟ್ನಪ್ರಧಾನ ಕಾರ್ಯದರ್ಶಿ ಬಸವಕುಮಾರ ಸ್ವಾಮೀಜಿ ಆಗ್ರಹಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಈ ಎರಡೂ ಬೇಡಿಕೆಗಳನ್ನು ಸರ್ಕಾರ ಮಾ.2ರೊಳಗೆ ಈಡೇರಿಸಬೇಕು. ಇಲ್ಲದಿದ್ದರೆ, ಮಾರ್ಚ್ 3ರಿಂದ ಕುಂಬಳಗೋಡಿನ ಬಸವ ಗಂಗೋತ್ರಿ ಆಶ್ರಮದ ಆವರಣದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

‘ಬೆಂಗಳೂರು–ಮೈಸೂರು ಹೆದ್ದಾರಿ ಸಂಪರ್ಕಿಸುವ ರಸ್ತೆ ನಿರ್ಮಾಣಕ್ಕಾಗಿ ಸಂಸ್ಥೆಯ ಜಾಗವನ್ನು ಸ್ವಾಧೀನ ಮಾಡಿಕೊಳ್ಳಲಾಗಿದೆ. ಪರಿಹಾರದ ಹಣಕ್ಕಾಗಿ ಕಚೇರಿಗಳಿಗೆ ಅಲೆದರೂ ಇದುವರೆಗೆ ಹಣ ಸಂಸ್ಥೆಗೆ ಬಂದಿಲ್ಲ. ಕೂಡಲೇ ಪರಿಹಾರದ ಹಣ ಸಂಸ್ಥೆಯ ಖಾತೆಗೆ ಜಮಾ ಮಾಡಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.