ಬೆಂಗಳೂರು: ‘ತೋಟಗಾರಿಕೆ ಇಲಾಖೆ ಸಚಿವರು ಮತ್ತು ಅಧಿಕಾರಿಗಳು ಹನಿ ನೀರಾವರಿ ಅಳವಡಿಸಲು ಮತ್ತು ಸಬ್ಸಿಡಿ ಹಣ ರೈತರಿಗೆ ಬಿಡುಗಡೆ ಮಾಡಲು ಕಮಿಷನ್ ಕೇಳಿದ್ದಾರೆ ಎಂದು ಸೂಕ್ಷ್ಮ ಹನಿ ನೀರಾವರಿ ವಿತರಕರ ಸಂಘ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ’ ಎಂದು ಇರಿಗೇಶನ್ ಅಸೋಸಿಯೇಷನ್ ಆಫ್ ಕರ್ನಾಟಕದ(ಐಎಕೆ) ಅಧ್ಯಕ್ಷ ಆರ್.ಪ್ರಸಾದ್ ಸ್ಪಷ್ಟೀಕರಣ ನೀಡಿದ್ದಾರೆ.

‘ತೋಟಗಾರಿಕೆ ಮತ್ತು ಕೃಷಿ ಇಲಾಖೆಯಲ್ಲಿ ಸಹಾಯಧನ ವಿತರಿಸಲು‘ಫ್ರುಟ್ಸ್ ಮತ್ತು ಹಸಿರು’ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಅನುಷ್ಠಾನಗೊಳಿಸಲಾಗಿದೆ. ಇಲಾಖೆಯ ಮಾರ್ಗಸೂಚಿಯಂತೆ ರೈತರ ತೋಟಗಳಲ್ಲಿ ಸೂಕ್ಷ್ಮ ಹನಿ ನೀರಾವರಿ ವ್ಯವಸ್ಥೆ ಅಳವಡಿಸಲಾಗಿದೆ’ ಎಂದರು.

‘ಸರ್ಕಾರ ಮತ್ತು ಇಲಾಖೆಗೆ ಕೆಟ್ಟ ಹೆಸರು ತರಬೇಕೆಂಬ ಉದ್ದೇಶದಿಂದ ಸೂಕ್ಷ್ಮ ನೀರಾವರಿ ವಿತರಕ ಸಂಘ ಎಂದು ಹೇಳಿಕೊಂಡು, ಅದು ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ’ ಎಂದು ಅವರು ಪ್ರಕಟಣೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.