ಮಾನ್ಯ @narendramodi ಅವರೇ, ಹಿಂದಿನ ನಿಮ್ಮ ರಾಜ್ಯ @BJP4Karnataka ಸರ್ಕಾರದ ವಿರುದ್ಧ ರಾಜ್ಯದ ಗುತ್ತಿಗೆದಾರರು ಮಾಡಿರುವ 40% ಕಮಿಷನ್ ಆರೋಪದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಸಮಿತಿಯನ್ನು ರಚನೆ ಮಾಡುವ ಮೂಲಕ ನಾವು ನುಡಿದಂತೆ ನಡೆದಿದ್ದೇವೆ.
ಪ್ರಧಾನಿ @narendramodi ಅವರೇ, ನಿಮ್ಮ ಮೂಗಿನಡಿಯಲ್ಲಿಯೇ ದ್ವಾರಕಾ ಎಕ್ಸ್ಪ್ರೆಸ್ ಹೈವೇ ಯೋಜನೆಯಲ್ಲಿ ಪ್ರತಿ ಕಿ.ಮೀ.ಗೆ 250 ಕೋಟಿ ರೂ. ಕೊಳ್ಳೆ ಹೊಡೆಯಲಾಗಿದೆ, 5 ಟೋಲ್ ಪ್ಲಾಜಾಗಳಲ್ಲಿ 132 ಕೋಟಿ ಹಣವನ್ನು ಲೂಟಿ ಮಾಡಲಾಗಿದೆ, ನೀವು ಪದೇ ಪದೇ ಉಲ್ಲೇಖಿಸುವ ‘ಆಯುಷ್ಮಾನ್ ಭಾರತ್’ ಯೋಜನೆಯಲ್ಲಂತೂ ಮೃತಪಟ್ಟ ಸುಮಾರು 88,೦೦೦ ಫಲಾನುಭವಿಗಳ…