ಬೆಂಗಳೂರು: 2024–25ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸಿದರೆ, ಶೇ 5ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಜುಲೈ ಅಂತ್ಯದವರೆಗೆ ಬಿಬಿಎಂಪಿ ವಿಸ್ತರಿಸಿದೆ.

ಆರ್ಥಿಕ ವರ್ಷದ ಪೂರ್ಣ ಆಸ್ತಿ ತೆರಿಗೆಯನ್ನು ಪಾವತಿಸಿದರೆ ಬಿಬಿಎಂಪಿ ಕಾಯ್ದೆ ಪ್ರಕಾರ ಏಪ್ರಿಲ್ 30ರವರೆಗೆ ಶೇ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಇದೀಗ ಲೋಕಸಭಾ ಚುನಾವಣೆ ಘೋಷಣೆಯಾಗುವ ಹಿನ್ನೆಲೆಯಲ್ಲಿ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು ಚುನಾವಣೆ ಕಾರ್ಯದಲ್ಲಿ ತೊಡಗಿರುತ್ತಾರೆ. ಚಲನ್ ಸೃಜನೆ ಹಾಗೂ ಆನ್ಲೈನ್ನಲ್ಲಿ ಆಸ್ತಿ ತೆರಿಗೆಯನ್ನು ಸಕಾಲದಲ್ಲಿ ಪಾವತಿಸುವುದು ಕಷ್ಟಸಾಧ್ಯವಾಗಿರುತ್ತದೆ. ಹೀಗಾಗಿ, ಶೇ 5ರಷ್ಟು ರಿಯಾಯಿತಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಹೊಸ ಪದ್ಧತಿ ಇಲ್ಲ: ‘ಈಗಿರುವ ಆಸ್ತಿ ತೆರಿಗೆ ಪದ್ಧತಿಯೇ 2024–25ನೇ ಸಾಲಿಗೂ ಮುಂದುವರಿಯುತ್ತದೆ. ಮಾರ್ಗಸೂಚಿ ದರದ ಅನ್ವಯ ಆಸ್ತಿ ತೆರಿಗೆ ನಿರ್ಧರಿಸುವ ಹೊಸ ಪದ್ಧತಿ ಸದ್ಯಕ್ಕೆ ಜಾರಿಯಾಗುವ ಲಕ್ಷಣಗಳಿಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೊಸ ಪದ್ಧತಿ ಜಾರಿಗೆ ತಂದರೆ ತೊಂದರೆಯಾಗಬಹುದು ಎಂಬ ಲೆಕ್ಕಾಚಾರವಿದೆ’ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.