ಬೆಂಗಳೂರು: ರಾಜ್ಯದಲ್ಲಿ ಮದ್ಯ ನಿಷೇಧಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೆಣ್ಣು ಮಕ್ಕಳಿಂದ 'ಮನಿ ಆರ್ಡರ್ ಚಳವಳಿ'ಯನ್ನು ಮದ್ಯ ನಿಷೇಧ ಆಂದೋಲನವು ಇದೇ 18ರಂದು ಹಮ್ಮಿಕೊಂಡಿದೆ.

ಲಾಕ್‍ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟ ನಿರ್ಬಂಧಿಸಿದ ಕಾರಣ ಮದ್ಯ ಸೇವಿಸುವ ಲಕ್ಷಾಂತರ ಮಂದಿ ವ್ಯಸನಮುಕ್ತರಾಗಿದ್ದಾರೆ. ಇದರಿಂದ ನಗರ ಹಾಗೂ ಗ್ರಾಮೀಣ ಭಾಗದ ಕುಟುಂಬಗಳಲ್ಲಿ ನೆಮ್ಮದಿ, ಶಾಂತಿ ನೆಲೆಸಿತ್ತು. ಆದರೆ, ಸರ್ಕಾರ ಆದಾಯದ ನೆಪ ಹೇಳಿ ಸಮಾಜದ ವಿರೋಧದ ನಡುವೆಯೂ ಮತ್ತೆ ಮದ್ಯ ಮಾರಾಟಕ್ಕೆ ಅನುಮತಿ ನೀಡಿದೆ ಎಂದು ದೂರಿದೆ.

ಈ ಸಂದೇಶವನ್ನು ಸರ್ಕಾರಕ್ಕೆ ರವಾನಿಸುವ ಉದ್ದೇಶದಿಂದ ಹೆಣ್ಣುಮಕ್ಕಳು ಸ್ಥಳೀಯ ಅಂಚೆ ಕಚೇರಿಗಳಲ್ಲಿ ₹10 ಹಾಗೂ ₹20 ಮನಿಯಾರ್ಡರ್ ಮಾಡುವ ಮೂಲಕ ಮದ್ಯ ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಬೇಕು ಎಂದು ವಿನಂತಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.