ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಈಶ್ವರ ಖಂಡ್ರೆ ಅವರ ಬಗ್ಗೆ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದು, ಜಾನೇಂದ್ರ ಅವರನ್ನು ಬಂಧಿಸುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಸದಾಶಿವನಗರ ಠಾಣೆಗೆ ದೂರು ನೀಡಿದೆ.

ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಆರಗ ಅವರು ಜನಾಂಗೀಯ ನಿಂದನೆ ಹಾಗೂ ಪ್ರಾಂತ್ಯವಾರು ಭೇದವನ್ನು ಉಂಟು ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಈ ರೀತಿ ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಶಾಂತಿ ಹಾಗೂ ಪ್ರಾಂತ್ಯವಾರು ಘರ್ಷಣೆ ಮೂಡಿಸಲು ಮುಂದಾಗಿದ್ದಾರೆ ಎಂದು ಮಹಾಸಭಾದ ಕಾರ್ಯದರ್ಶಿ ಎಚ್.ಎಂ. ರೇಣುಕ ಪ್ರಸನ್ನ ದೂರಿನಲ್ಲಿ ತಿಳಿಸಿದ್ದಾರೆ.

ಅನರ್ಹಗೊಳಿಸಿ: ಸಮಾಜದಲ್ಲಿ ಅಶಾಂತಿ ಉಂಟು ಮಾಡಲು ಕಾರಣರಾಗಿರುವ ಆರಗ ಜ್ಞಾನೇಂದ್ರ ಅವರನ್ನು ತಕ್ಷಣವೇ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ರೇಣುಕ ಪ್ರಸನ್ನ ವಿಧಾನಸಭೆ ಸ್ಪೀಕರ್ ಅವರನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.