ಬೆಂಗಳೂರು: ‘ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆ (ಟಿಎಸ್‌ಪಿ) ಅನುದಾನವು ಅನ್ಯ ಕಾರ್ಯಗಳಿಗೆ ಬಳಕೆಯಾಗುತ್ತಿದೆ. ಇದನ್ನು ಖಂಡಿಸಿ ಇದೇ 21ರಂದು ಬೆಳಿಗ್ಗೆ 11.30ಕ್ಕೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ.ಸಿ. ನಾರಾಯಣ್ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್‌ಸಿಎಸ್‌ಪಿ ಟಿಎಸ್‌ಪಿ ಅನುದಾನವನ್ನು ಅನ್ಯ ಕಾರ್ಯಗಳಿಗೆ ಬಳಸುತ್ತಿರುವುದರಿಂದ ದಲಿತರ ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿವೆ. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳೂ ಹೆಚ್ಚಳವಾಗುತ್ತಿವೆ. ಆದರೆ, ಆಳುವ ಸರ್ಕಾರಕ್ಕೆ ಕಣ್ಣು ಕಾಣದಂತಾಗಿದೆ. ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಜನಪ್ರತಿನಿಧಿಗಳು,ಬಲಾಢ್ಯರ ಅಡಿಯಾಳುಗಳಾಗಿ ಸ್ವಾರ್ಥ ರಾಜಕಾರಣ ಮಾಡುತ್ತಿದ್ದಾರೆ. ಅಭಿವೃದ್ಧಿಯ ಹೆಸರಲ್ಲಿ ನಿಸರ್ಗದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ದಲಿತರ ಅಭಿವೃದ್ಧಿಗೆ ಸ್ಥಾಪಿತವಾದ ಎಲ್ಲ ನಿಗಮ ಮಂಡಳಿಗಳಿಗೆ ಹೆಚ್ಚಿನ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಬೇಕು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹಾಗೂ ನಕಲಿ ಜಾತಿ ಪ್ರಮಾಣಪತ್ರ ಪಡೆದು, ಮೀಸಲಾತಿ ಹಕ್ಕನ್ನು ಕಬಳಿಸುತ್ತಿರುವವರ ವಿರುದ್ಧ ತನಿಖೆ ಮಾಡಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.