ಬೆಂಗಳೂರು: ‘ರೈತರ ಪಹಣಿಯಲ್ಲಿ ವಕ್ಫ್ ಮಂಡಳಿ ಹೆಸರು ಸೇರಿಸಿದ್ದನ್ನು ಈ ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಎಚ್ಚರಿಕೆ ನೀಡಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ವಿವಾದ ಸೃಷ್ಟಿಸುತ್ತಿವೆ. ಈ ಎರಡೂ ಪಕ್ಷಗಳು ಪರಸ್ಪರ ಕೆಸರೆರಚಾಟ ಬಿಟ್ಟು ರೈತರ ಹಿತರಕ್ಷಣೆಗೆ ಆದ್ಯತೆ ನೀಡಬೇಕು. ವಕ್ಫ್ ಮಂಡಳಿಗೆ ಸೇರಿದ ಭೂಮಿ ಎಂಬ ದಾಖಲೆಗಳಿದ್ದರೆ ಸರ್ಕಾರ ಬಿಡುಗಡೆಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿಗಳು ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್ ಮಂಡಳಿ ಹೆಸರು ಸೇರಿಸಿದ್ದಾರೆ. ರೈತರನ್ನು ಒಕ್ಕಲೆಬ್ಬಿಸುವ ವಕ್ಫ್ ವಿವಾದವನ್ನು ಕೂಡಲೇ ನಿವಾರಿಸಬೇಕು. ವಕ್ಫ್ ಮಂಡಳಿಗೆ ನೀಡಿರುವ ಅಧಿಕಾರವನ್ನು ಹಿಂಪಡೆಯಬೇಕು. ಸರ್ಕಾರಕ್ಕೆ ಧಮ್ ಇದ್ದರೆ ಮಂದಿರ, ಮಸೀದಿ ಹಾಗೂ ಚರ್ಚ್ಗಳಿಗೆ ಸೇರಿದ ಆಸ್ತಿಯನ್ನು ರಾಷ್ಟ್ರೀಕರಣ ಮಾಡಬೇಕು’ ಎಂದು ಸವಾಲು ಹಾಕಿದರು.

‘ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೈತರಿಗೆ ಮಾರಕವಾಗಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದ್ದರು. ಆದರೆ, ಬಿಜೆಪಿಯವರು ಇಂದು ವಕ್ಫ್ ಹೆಸರಿನಲ್ಲಿ ವಿವಾದ ಸೃಷ್ಟಿಸಿ ರೈತರ ಬಗ್ಗೆ ಕಾಳಜಿ ತೋರಿಸುತ್ತಿದ್ದಾರೆ. ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯ ಬಗ್ಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಿಲುವೇನು’ ಎಂದು ಪ್ರಶ್ನಿಸಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೀರಭದ್ರಸ್ವಾಮಿ, ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.