ಕೆ.ಆರ್.ಪುರ: ಆದೂರು ಗ್ರಾಮದಲ್ಲಿ ಪ್ರಭಾವಿಗಳು ಅತಿಕ್ರಮಣ ಮಾಡಿಕೊಂಡಿರುವ ಸರ್ಕಾರಿ ಗೋಮಾಳ, ಖರಾಬು ಹಾಗೂ ರಾಜ ಕಾಲುವೆಗಳಲ್ಲಿನ ಒತ್ತುವರಿ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಕಾರ್ಯಕರ್ತರು ದಾಖಲೆ ಹಿಡಿದು ಪ್ರತಿಭಟನೆ ನಡೆಸಿದರು.

‘ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಆದೂರು ಗ್ರಾಮದ ಸರ್ವೆ ನಂಬರ್ 135 ಮತ್ತು 85 ರಲ್ಲಿರುವ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸರ್ಕಾರಿ ಜಮೀನನ್ನು ಬಲಾಢ್ಯರು ಒತ್ತುವರಿ ಮಾಡಿಕೊಂಡಿದ್ದಾರೆ. ಸರ್ಕಾರಕ್ಕೆ ನಷ್ಟ ಉಂಟು ಮಾಡಿದ್ದಾರೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಆದೂರು ಗ್ರಾಮದಲ್ಲಿನ ಸರ್ಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಿಸಿ ಅನಧಿಕೃತವಾಗಿ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ. ಇಷ್ಟೆಲ್ಲ ಅಕ್ರಮ ನಡೆಯುತ್ತಿದ್ದರೂ ಬಿದರಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಬಡಾವಣೆ ನಿರ್ಮಾಣ ನಕ್ಷೆಗೆ ಅನುಮೋದನೆ ನೀಡಿದ್ದಾರೆ’ ಎಂದು ಗ್ರಾಮದ ನಿವಾಸಿ ಆದೂರು ಮಂಜುನಾಥ್ ದೂರಿದರು.

‘ಕೆ.ಆರ್.ಪುರ ಪೂರ್ವ ತಾಲ್ಲೂಕು ತಹಶೀಲ್ದಾರ್ ಅವರು ಖುದ್ದು ಸ್ಥಳ ಪರಿಶೀಲನೆ ನಡೆಸಬೇಕು. ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು‘ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬೆಂಗಳೂರು ನಗರ ಜಿಲ್ಲಾ ಪ್ರಧಾನ ಸಂಚಾಲಕ ಮುನಿನಂಜಪ್ಪ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಡಿಎಸ್ಎಸ್ ಬೆಂಗಳೂರು ವಿಭಾಗೀಯ ಸಂಚಾಲಕ ಮಣಿಪಾಲ್ ರಾಜಪ್ಪ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.