ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಆರ್‌ಆರ್‌: 71 ಎಕರೆ ಸ್ವಾಧೀನಕ್ಕೆ ಬಿಡಿಎ ಸಜ್ಜು

Published 16 ಜುಲೈ 2024, 22:33 IST
Last Updated 16 ಜುಲೈ 2024, 22:33 IST
ಅಕ್ಷರ ಗಾತ್ರ

ಬೆಂಗಳೂರು: ಪೆರಿಫೆರಲ್‌ ವರ್ತುಲ ರಸ್ತೆ (ಪಿಆರ್‌ಆರ್‌) ನಿರ್ಮಾಣಕ್ಕೆ 71 ಎಕರೆ ಭೂಮಿಯನ್ನು  ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಗಳವಾರ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

ಎರಡು ವರ್ಷಗಳ ಹಿಂದೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದ ಬಿಡಿಎ, ಭೂಸ್ವಾಧೀನಕ್ಕೆ ಸರ್ಕಾರ ಸೂಚಿಸಿರುವುದರಿಂದ ಪ್ರಕ್ರಿಯೆ ಪೂರ್ಣಗೊಳಿಸಲು ಸಜ್ಜಾಗಿದೆ.

258 ಆಸ್ತಿಗಳ ಮಾಲೀಕರಿಗೆ ಬಿಡಿಎ ದಾಖಲೆಗಳನ್ನು ಸಲ್ಲಿಸಲು ಸಾರ್ವಜನಿಕ ಪ್ರಕಟಣೆ ನೀಡಿದ್ದು, ಯಾವುದಾದರೂ ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಸೂಚಿಸಿದೆ. ತುಮಕೂರು ರಸ್ತೆ, ಬಳ್ಳಾರಿ ರಸ್ತೆ, ಹಳೆ ಮದ್ರಾಸ್‌ ರಸ್ತೆ ಮತ್ತು ಹೊಸೂರು ರಸ್ತೆಗಳಲ್ಲಿ ‘ಕ್ಲೋವರ್‌ ಲೀಫ್‌ ಇಂಟರ್‌ಚೇಂಜ್‌’ ನಿರ್ಮಿಸಲು 2022ರ ಏಪ್ರಿಲ್‌ನಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು.

72 ಕಿ.ಮೀ ಉದ್ದದ ಪಿಆರ್‌ಆರ್‌ಗೆ 1,810 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು 17 ವರ್ಷಗಳ ಹಿಂದೆ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ರೈತರು ಇನ್ನೂ ಪರಿಹಾರಕ್ಕಾಗಿ ಕಾಯುತ್ತಿದ್ದಾರೆ. ಪಿಆರ್‌ಆರ್‌ ಯೋಜನೆಗೆ ₹27 ಸಾವಿರ ಕೋಟಿ ವೆಚ್ಚ ಮಾಡಲು ಸರ್ಕಾರ ಉದ್ದೇಶಿಸಿದ್ದು, ಭೂಸ್ವಾಧೀನದ ಪರಿಹಾರದ ಬಗ್ಗೆ ಸ್ಪಷ್ಟತೆ ಹೊಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT