ಬೆಂಗಳೂರು: ‘ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ನ್ಯಾಯಯುತವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಕೂಡಲೇ ನೇಮಕಾತಿ ಆದೇಶ ನೀಡಬೇಕು’ ಎಂದು ಆಯ್ಕೆಯಾದ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭ್ಯರ್ಥಿಗಳು, ‘ಬಿಜೆಪಿ ಸರ್ಕಾರದಲ್ಲಿ ಪಿಎಸ್ಐ ಹಗರಣದ ತನಿಖೆ ದಾರಿ ತಪ್ಪಿತ್ತು. ಕಾಂಗ್ರೆಸ್ ಸರ್ಕಾರ ಹಗರಣದ ಮರು ತನಿಖೆ ನಡೆಸಿ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು. ಪರೀಕ್ಷೆಯಲ್ಲಿ ಆಯ್ಕೆಯಾಗಿರುವ 490ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ನ್ಯಾಯಾಂಗ ತನಿಖೆ ಹಾಗೂ ಮಂಪರು ಪರೀಕ್ಷೆಗೆ ಒಳಪಡಿಸಬೇಕು’ ಎಂದು ಒತ್ತಾಯಿಸಿದರು.

‘ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಕಾರಣ ಉನ್ನತ ಅಧಿಕಾರಿಗಳು ಮತ್ತು ಕೆಲ ಅಭ್ಯರ್ಥಿಗಳು ಜೈಲು ಪಾಲಾಗಿದ್ದಾರೆ. 135ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿರುವ ಅಭ್ಯರ್ಥಿಗಳು ಎಲ್ಲ ರೀತಿಯ ತನಿಖೆಗೆ ಸಹಕಾರ ನೀಡಲಿದ್ದಾರೆ. ಕೂಡಲೇ ಅವರಿಗೆ ನೇಮಕಾತಿ ಆದೇಶ ಪ್ರತ ನೀಡಬೇಕು’ ಎಂದು ಆಯ್ಕೆಯಾಗಿರುವ ಆಭ್ಯರ್ಥಿಗಳಾದ ಚಂದನ್, ಕಿರಣ್, ಪ್ರತಾಪ್, ರಚನಾ, ಶ್ರೀಕಾಂತ್ ನಾಯಕ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.