ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಕಾರ್ಯಭಾರ ಇಲ್ಲದಿರುವ ಮನೋವಿಜ್ಞಾನ ವಿಷಯದ ಪ್ರಾಧ್ಯಾಪಕ ಹುದ್ದೆಗಳನ್ನು ಸಸ್ಯವಿಜ್ಞಾನ ಮತ್ತು ಪ್ರಾಣಿವಿಜ್ಞಾನ ವಿಷಯಗಳಿಗೆ ಪರಿವರ್ತಿಸಲು ಮುಂದಾಗಿರುವ ಕಾಲೇಜು ಶಿಕ್ಷಣ ಇಲಾಖೆಯ ಕ್ರಮಕ್ಕೆ ಹುದ್ದೆಯ ಆಕಾಂಕ್ಷಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯದ 16 ಪದವಿ ಕಾಲೇಜುಗಳಲ್ಲಿ ಒಟ್ಟು 19 ಮನಃಶಾಸ್ತ್ರ ಪ್ರಾಧ್ಯಾಪಕರ ಹುದ್ದೆಗಳಿದ್ದು ವಿದ್ಯಾರ್ಥಿಗಳ ಕೊರತೆಯಿಂದ ಖಾಲಿ ಉಳಿದಿವೆ. ಈ ಹುದ್ದೆಗಳನ್ನು ಬೇರೆ ಕಾಲೇಜುಗಳಿಗೆ ಸ್ಥಳಾಂತರಿಸಬೇಕೆಂದರೆ, ಅಲ್ಲಿಯೂ ಕಾರ್ಯಾಭಾರ ಇಲ್ಲ. ಹಾಗಾಗಿ ಆ ಹುದ್ದೆಗಳಲ್ಲಿ 10 ಹುದ್ದೆಗಳನ್ನು ಪ್ರಾಣಿವಿಜ್ಞಾನಕ್ಕೆ, 9 ಹುದ್ದೆಗಳನ್ನು ಸಸ್ಯವಿಜ್ಞಾನ ವಿಭಾಗಕ್ಕೆ ಪರಿವರ್ತಿಸಿ ಸ್ಥಳಾಂತರಿಸಲು ಇಲಾಖೆ ಸೂಚಿಸಿದೆ.

‘ನಗರದ ಖಾಸಗಿ ಕಾಲೇಜುಗಳಲ್ಲಿ ಮನೋವಿಜ್ಞಾನ ಕೋರ್ಸ್‌ಗೆ ಪ್ರವೇಶ ಬಯಸಿ ಸಾವಿರಾರು ಅರ್ಜಿಗಳು ಬರುತ್ತಿವೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಕಾಲೇಜುಗಳಿಗೆ ವಿದ್ಯಾರ್ಥಿಗಳು ಬರುವುದಿಲ್ಲವೇ’ ಎಂದು ಪ್ರಶ್ನಿಸಿರುವ ಹುದ್ದೆಯ ಆಕಾಂಕ್ಷಿಗಳು, ‘ಸರ್ಕಾರಿ ಕಾಲೇಜುಗಳಲ್ಲಿ ಮನೋವಿಜ್ಞಾನ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಿದರೆ ವಿದ್ಯಾರ್ಥಿಗಳು ಬಂದೇ ಬರುತ್ತಾರೆ. ಇಲಾಖೆಯು ತನ್ನ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು. ಮನೋವಿಜ್ಞಾನ ಪ್ರಾಧ್ಯಾಪಕರ ಹುದ್ದೆಯನ್ನು ಪರಿವರ್ತನೆ ಮಾಡದೆ, ಖಾಲಿ ಹುದ್ದೆಗಳ ಭರ್ತಿಗೆ ಮುಂದಾಗಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.