ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆಯ(ಪಿಟಿಸಿಎಲ್) ಸಮಗ್ರ ತಿದ್ದುಪಡಿಗೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ 13ನೇ ದಿನವೂ ಮುಂದುವರಿದಿದೆ.

ಸಂಕ್ರಾಂತಿ ಹಬ್ಬವನ್ನೂ ತೊರೆದು ಸಂತ್ರಸ್ತರು ಹೋರಾಟ ಮುಂದುವರಿಸಿದ್ದಾರೆ. ಸಾಹಿತಿ ಬರಗೂರು ರಾಮಚಂದ್ರಪ್ಪ ಮತ್ತು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವರು ಶನಿವಾರ ಧರಣಿಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.

‘ಬಲಾಢ್ಯರ ಕೈಗೆ ದುರ್ಬಲರ ಭೂಮಿ ಹೋಗಬಾರದು ಎಂಬ ಕಾರಣಕ್ಕೆ ಕಾನೂನು ತರಲಾಗಿದೆ. ಅದರಲ್ಲಿರುವ ತೊಡಕುಗಳನ್ನು ನಿವಾರಿಸದಿದ್ದರೆ ದಲಿತರು ಭೂರಹಿತರಾಗಲಿದ್ದಾರೆ’ ಎಂದು ಆಯನೂರು ಮಂಜುನಾಥ್ ಹೇಳಿದರು.

‘ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದರೆ ದಲಿತರ ಭೂಮಿ ಉಳಿಯಲಿದೆ. ಈ ವಿಷಯವನ್ನು ಸರ್ಕಾರದ ಗಮನಕ್ಕೆ ತಂದು ಒತ್ತಡ ಹೇರಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.