ಕೆ.ಆರ್.ಪುರ: ಸೇಪಿಯನ್ಸ್ ಇಂಟರ್‌ನ್ಯಾಷನಲ್ ಕಾರ್ಪೊರೇಷನ್‌ನ ಉದ್ಯೋಗಿಗಳು ನೇತ್ರದಾನ ಮಾಡಲು ಮುಂದಾಗಿದ್ದಾರೆ.

ನೇತ್ರದಾನ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥ ಅಭೀರ್ ಮುಸ್ತಾಫಿ, ’ಪುನೀತ್ ರಾಜ್‍ಕುಮಾರ್ ಅವರ ಪ್ರೇರಣೆಯಿಂದ ನಮ್ಮ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಎರಡು ಸಾವಿರಕ್ಕೂ ಹೆಚ್ಚಿನ ಉದ್ಯೋಗಿಗಳು ನೇತ್ರದಾನ ಮಾಡಲು ಮುಂದಾಗಿದ್ದೇವೆ. ಅಭಿಯಾನದ ಮೊದಲ ದಿನವಾಗಿ 200 ಉದ್ಯೋಗಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ‘ ಎಂದು ಹೇಳಿದರು.

ಕೊರೊನಾದಿಂದಾಗಿ ಮನೆಯಿಂದಲೇ ಕೆಲಸ ಮಾಡುತ್ತಿರುವ ಅನ್ಯ ರಾಜ್ಯದ ಉದ್ಯೋಗಿಗಳಿಗೂ ಇ–ಮೇಲ್ ಮೂಲಕ ಅಭಿಯಾನಕ್ಕೆ ಕೈಜೋಡಿಸುವಂತೆ ಕೋರಿಕೆ ಸಲ್ಲಿಸಿಲಾಗಿತ್ತು. ಅವರು ಅಭಿಯಾನದ ಭಾಗವಾಗಿ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.