ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

'ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ' ಎಂದು ಸಿಸಿಬಿ ಮೂಲಗಳು ಹೇಳಿವೆ.

'ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದ. ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ. ಎಲ್ಲ ಕೃತ್ಯಗಳ ಬಗ್ಗೆ ವರದಿ ಸಿದ್ಧಪಡಿಸಿ ವಶಕ್ಕೆ ಪಡೆಯಲಾಗಿದೆ' ಎಂದು ಮೂಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.