ಬೆಂಗಳೂರು: ‘ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆಸೆಟ್) ಪ್ರಶ್ನೆ ಪತ್ರಿಕೆಯನ್ನು ಕನ್ನಡದಲ್ಲಿಯೂ ನೀಡಬೇಕು’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಸೂಚಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೇ 24ರಂದು ಹಮ್ಮಿಕೊಂಡಿರುವ ಕೆಸೆಟ್ ಪರೀಕ್ಷೆಯ ಮನೋವಿಜ್ಞಾನ ಪ್ರಶ್ನೆ ಪತ್ರಿಕೆಯನ್ನು ಕೇವಲ ಇಂಗ್ಲಿಷ್ ಭಾಷೆಯಲ್ಲಿ ನೀಡುವ ನಿರ್ಧಾರವನ್ನು ಖಂಡಿಸಿರುವ ಬಿಳಿಮಲೆ, ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

‘ಪರೀಕ್ಷಾ ಪ್ರಾಧಿಕಾರದ ನಿರ್ಣಯವು ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ಅನ್ಯಾಯವಷ್ಟೇ ಅಲ್ಲ, ಈ ನೆಲದ ಕಾನೂನನ್ನು ಉಲ್ಲಂಘಿಸುವ ವಿಷಯವಾಗಿದೆ. ಕೂಡಲೇ ಈ ಬಗ್ಗೆ ಕ್ರಮವಹಿಸಿ ಕನ್ನಡ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಒದಗಿಸಿ, ಈ ಅಚಾತುರ್ಯಕ್ಕೆ ಕಾರಣವೇನು ಎಂಬ ಬಗ್ಗೆ ವರದಿ ಸಲ್ಲಿಸಬೇಕು’ ಎಂದು ತಿಳಿಸಿದ್ದಾರೆ.

‘ಒಂದು ವೇಳೆ ಇಂಗ್ಲಿಷ್ನಲ್ಲಿ ಮಾತ್ರ ಪರೀಕ್ಷೆಯನ್ನು ನಿರ್ವಹಿಸಿ, ಕನ್ನಡ ಭಾಷಾ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಲ್ಲಿ ಮುಂದಿನ ಆಗುಹೋಗುಗಳಿಗೆ ತಾವೇ ಜವಾಬ್ದಾರಿ ಹೊರಬೇಕಾಗುತ್ತದೆ’ ಎಂದು ಪ್ರಾಧಿಕಾರದ ಮುಖ್ಯಸ್ಥರಿಗೆ ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.