ಬೆಂಗಳೂರು: ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪರಸ್ಪರ ಕಿತ್ತಾಡಿಕೊಂಡಿದ್ದ ಎಎಸ್ಐ ಹಾಗೂ ಹೆಡ್ಕಾನ್ಸ್ಟೆಬಲ್ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಸಹಾಯಕ ಸಬ್ಇನ್ಸ್ಟೆಕ್ಟರ್ ಮಂಜುನಾಥ್ ಹಾಗೂ ಹೆಡ್ಕಾನ್ಸ್ಟೆಬಲ್ ಅಂಜನಮೂರ್ತಿ ಅಮಾನತುಗೊಂಡ ಸಿಬ್ಬಂದಿ.

ಪ್ರಾಥಮಿಕ ವಿಚಾರಣೆ ವೇಳೆ ಇಬ್ಬರೂ ತಪ್ಪು ಎಸಗಿರುವುದು ಸಾಬೀತಾಗಿದ್ದು ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜುಲೈ 16ರಂದು ಠಾಣೆಯಲ್ಲಿ ಕರ್ತವ್ಯದ ಅವಧಿಯಲ್ಲಿ ಇಬ್ಬರು ಪರಸ್ಪರ ಕಿತ್ತಾಡಿಕೊಂಡಿದ್ದರು. ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದರು.

ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಸಿಪಿ ಅವರಿಗೆ ವಿಸ್ತೃತ ವರದಿ ಸಲ್ಲಿಸಲಾಗಿತ್ತು. ಅವರು ವಿಚಾರಣೆ ನಡೆಸಿ ನಗರ ಪೊಲೀಸ್ ಕಮಿಷನರ್ಗೆ ವರದಿ ಸಲ್ಲಿಸಿದ್ದರು. ಆ ವರದಿ ಆಧರಿಸಿ ಅಮಾನತು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.