ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ.ಕೆ.ಎಸ್. ರವೀಂದ್ರನಾಥ್ ನೇಮಕಗೊಂಡಿದ್ದಾರೆ.

ಡಾ.ಸಿ.ಎನ್. ಮಂಜುನಾಥ್ ಅವರ ಅವಧಿ ಜ.31ರಂದು ಮುಕ್ತಾಯಗೊಂಡಿರುವುದರಿಂದ ಸರ್ಕಾರ ಈ ನೇಮಕಾತಿ ಮಾಡಿ, ಆದೇಶ ಹೊರಡಿಸಿದೆ. ಈ ನೇಮಕಾತಿ ಮುಂದಿನ ಆದೇಶದವರೆಗೆ ಜಾರಿಯಲ್ಲಿ ಇರಲಿದೆ. ಡಾ.ಕೆ.ಎಸ್.ರವೀಂದ್ರನಾಥ್ ಅವರು ಈ ಹಿಂದೆ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್ಜಿಯುಎಚ್ಎಸ್) ಕುಲಪತಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ್ದರು. ಸದ್ಯ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಂಸ್ಥೆಯ ನಿರ್ದೇಶಕ ಹುದ್ದೆಗೆ ಜ.12ರಂದು ಪ್ರಕಟಣೆ ಹೊರಡಿಸಿದ್ದ ವೈದ್ಯಕೀಯ ಶಿಕ್ಷಣ ಇಲಾಖೆ, ಅರ್ಜಿ ಸಲ್ಲಿಕೆಗೆ ಜ.19ರವರೆಗೆ ಕಾಲಾವಕಾಶ ನೀಡಿತ್ತು. ಈ ಹುದ್ದೆಗೆ ಒಟ್ಟು 22 ಅರ್ಜಿ ಸಲ್ಲಿಕೆಯಾಗಿದ್ದವು. ಅವುಗಳಲ್ಲಿ 11 ಅರ್ಜಿಗಳ ಕಿರುಪಟ್ಟಿಯನ್ನು ಇಲಾಖೆ ತಯಾರಿಸಿತ್ತು. ಆದರೆ, ಪೂರ್ಣಾವಧಿ ನಿರ್ದೇಶಕರ ನೇಮಕಾತಿ ಪ್ರಕ್ರಿಯೆ ನಡೆಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.