ಬೆಂಗಳೂರು: ‘ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದಕ್ಕೆ (ಆರ್ಸಿಇಪಿ) ಕೇಂದ್ರ ಸರ್ಕಾರ ಸಹಿ ಹಾಕಬಾರದು’ ಎಂದು ಒತ್ತಾಯಿಸಿ ಕೆಪಿಸಿಸಿ ರಾಜ್ಯ ರೈತ ಘಟಕದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಕಂಟೋನ್ಮೆಂಟ್ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ನಗರ ಹಾಗೂ ಹೊರ ಜಿಲ್ಲೆಗಳಿಂದ ಬಂದಿದ್ದ ಕಾರ್ಯಕರ್ತರು ಹಾಗೂ ರೈತರು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಿಂದ ರೈಲು ನಿಲ್ದಾಣದವರೆಗೆ ಮೆರವಣಿಗೆ ನಡೆಸಿದರು. ನಿಲ್ದಾಣದ ಎದುರು ಸೇರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.

ಗುಂಪಾಗಿ ಸೇರಿದ್ದ ಪ್ರತಿಭಟನಾಕಾರರು ರೈಲು ಸಂಚಾರ ತಡೆಯುವುದಕ್ಕಾಗಿ ನಿಲ್ದಾಣದೊಳಗೆ ನುಗ್ಗಲು ಯತ್ನಿಸಿದರು. ಪ್ರವೇಶ ದ್ವಾರದಲ್ಲಿದ್ದ ಪೊಲೀಸರು ಕಾರ್ಯಕರ್ತರನ್ನು ತಡೆದರು. ಮಾತಿನ ಚಕಮಕಿ ನಡೆದು ತಳ್ಳಾಟ ನೂಕಾಟ ಉಂಟಾಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ‘ಆರ್ಸಿಇಪಿ ಒಪ್ಪಂದಕ್ಕೆ ಸಹಿ ಮಾಡುವುದಿಲ್ಲ. ಸಂಪೂರ್ಣವಾಗಿ ರದ್ದುಪಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಹಾಗೂ ಜನರ ಬಳಿ ಹೇಳಬೇಕು’ ಎಂದು ಒತ್ತಾಯಿಸಿದರು.

‘ಕೇಂದ್ರ ಸರ್ಕಾರವು ಆರ್ಸಿಇಪಿ ಒಪ್ಪಂದದ ಮೂಲಕ ದೇಶದ ರೈತರಿಗೆ ವಿಷವುಣಿಸಲು ಹೊರಟಿದೆ. ದೇಶದ ಆಸ್ತಿಯನ್ನೆಲ್ಲ ಬಹುರಾಷ್ಟ್ರೀಯ ಕಂಪನಿಗಳಿಗೆ ಮಾರಾಟ ಮಾಡುವ ಹುನ್ನಾರ ಈ ಒಪ್ಪಂದದ ಹಿಂದಿದೆ’ ಎಂದು ದೂರಿದರು.

‘ಒಪ್ಪಂದಕ್ಕೆ ಸಹಿ ಹಾಕಿದರೆ ಬೆಲೆಗಳಲ್ಲಿ ವ್ಯತ್ಯಾಸ ಉಂಟಾಗಿ ಆಮದು ಶುಲ್ಕದಲ್ಲಿ ಇಳಿಕೆ ಕಂಡುಬರಲಿದೆ. ಸಣ್ಣ ಕೈಗಾರಿಕೆಗಳು ಬಂದ್ ಆಗಿ ನಿರುದ್ಯೋಗ ಹೆಚ್ಚಾಗಲಿದೆ. ರೈತರ ಆದಾಯಕ್ಕೆ ಸಹಕಾರಿ ಆಗಿರುವ ಹೈನುಗಾರಿಕೆ ಮೇಲೂ ಹೆಚ್ಚಿನ ಪರಿಣಾಮ ಬೀರಲಿದೆ’ ಎಂದು ಖಂಡ್ರೆ ಹೇಳಿದರು.

ಕಾಂಗ್ರೆಸ್ ಮುಖಂಡ ಎಚ್.ಎಂ.ರೇವಣ್ಣ, ‘ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳಿಂದ ದೇಶದ ಹಣಕಾಸು ಸ್ಥಿತಿ ಈಗಾಗಲೇ ಪಾತಾಳಕ್ಕೆ ಕುಸಿದಿದೆ’ ಎಂದು ದೂರಿದರು.

ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ, ರೈತ ಘಟಕದ ಅಧ್ಯಕ್ಷ ಸಚಿನ್ ಮಿಗಾ ಪ್ರತಿಭಟನೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.