ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Rain Alert: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಮಳೆ ಸಾಧ್ಯತೆ

Published 21 ಮಾರ್ಚ್ 2024, 23:56 IST
Last Updated 21 ಮಾರ್ಚ್ 2024, 23:56 IST
ಅಕ್ಷರ ಗಾತ್ರ

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಶುಕ್ರವಾರದಿಂದ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಹಾಗೂ ಮೈಸೂರಿನಲ್ಲಿ ಶುಕ್ರವಾರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ಗ್ರಾಮಾಂತರ, ಮೈಸೂರು ಹಾಗೂ ಮಂಡ್ಯದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಎರಡು ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ
ನೀಡಿದೆ. 

ಕೊಪ್ಪಳದಲ್ಲಿ ಗರಿಷ್ಠ (38.6 ಡಿಗ್ರಿ ಸೆಲ್ಸಿಯಸ್) ಹಾಗೂ ಬೀದರ್‌ನಲ್ಲಿ ಕನಿಷ್ಠ (19.4 ಡಿಗ್ರಿ ಸೆಲ್ಸಿಯಸ್) ಉಷ್ಣಾಂಶ ಗುರುವಾರ ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT