ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 25ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವು ಶನಿವಾರ ಬೆಳಿಗ್ಗೆ 11 ಗಂಟೆಗೆ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಜೆ.ಎನ್.ಟಾಟಾ ಸಭಾಂಗಣದಲ್ಲಿ ನಡೆಯಲಿದೆ. ಮುಖ್ಯ ಅತಿಥಿಯಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ. ಬಿ.ವರಾಲೆ ಭಾಗವಹಿಸಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಪಾಲ್ಗೊಳ್ಳಲಿದ್ದಾರೆ.
2 ವೈದ್ಯಕೀಯ ಕಾಲೇಜು
‘ಚನ್ನಪಟ್ಟಣದಲ್ಲಿ ರಾಜರಾಜೇಶ್ವರಿ ಶಿಕ್ಷಣ ಸಮೂಹದ ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಚಿತ್ರದುರ್ಗದ ಸರ್ಕಾರಿ ವೈದ್ಯಕೀಯ ಕಾಲೇಜುಗಳು 2023-24ನೇ ಸಾಲಿನಿಂದ ಪ್ರವೇಶ ಪ್ರಕ್ರಿಯೆ ಆರಂಭಿಸಲಿವೆ. ತಲಾ 150 ಸೀಟುಗಳ ಪ್ರವೇಶಕ್ಕೆ ಅನುಮತಿ ಸಿಕ್ಕಿದೆ’ ಎಂದು ಡಾ.ಎಂ.ಕೆ.ರಮೇಶ್ ತಿಳಿಸಿದರು. ‘ವೈದ್ಯಕೀಯ ಪ್ರವೇಶ ಶುಲ್ಕದ ವಿಚಾರ ಇನ್ನೂ ಚರ್ಚೆಯಲ್ಲಿದೆ. ಪ್ರವೇಶ ಮೇಲ್ವಿಚಾರಣಾ ಸಮಿತಿ ನಿಗದಿ ಮಾಡುವ ಶುಲ್ಕಕ್ಕೆ ಸರ್ಕಾರ ಅನುಮೋದನೆ ನೀಡಿದ ಬಳಿಕ ಶುಲ್ಕ ಅಂತಿಮವಾಗಲಿದೆ. ಡೀಮ್ಡ್ ವಿಶ್ವವಿದ್ಯಾಲಯಗಳ ಶುಲ್ಕ ನಮ್ಮ ವ್ಯಾಪ್ತಿಗೆ ಬರುವುದಿಲ್ಲ’ ಎಂದರು.