ಬೆಂಗಳೂರು: ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ದೃಷ್ಟಿಕೋನ, ವಿಶ್ವಮಾನವ ಸಂದೇಶ, ವೈಚಾರಿಕ ಚಿಂತನೆಗಳ ಕಾರಣಕ್ಕೆ ಕುವೆಂಪು ಅವರು ಶತಮಾನದ ಬಳಿಕವೂ ಜನಮನದಲ್ಲಿ ಉಳಿದಿದ್ದಾರೆ’ ಎಂದು ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಹೇಳಿದರು.

ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆಯು ಕನ್ನಡ ನುಡಿಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಕದಂಬ ರತ್ನ ಪ್ರಶಸ್ತಿ ಪ್ರದಾನ, ರಾಜ್ಯಮಟ್ಟದ ಕಾವ್ಯೋತ್ಸವ ಹಾಗೂ ನೃತ್ಯ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕುವೆಂಪು ಅವರ ಬಳಿಕ ಅನೇಕ ಸಾಹಿತಿಗಳು ಅನೇಕ ಕೃತಿಗಳನ್ನು ರಚಿಸಿದ್ದಾರೆ. ದೊಡ್ಡ ಪ್ರಶಸ್ತಿಗಳನ್ನೂ ಪಡೆದಿದ್ದಾರೆ. ಆದರೆ, ಸರ್ವಕಾಲಕ್ಕೂ ಜನಮಾನಸದಲ್ಲಿ ಉಳಿಯವ ಲೇಖಕರಾಗಲಿಲ್ಲ ಎಂದರು.

ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ. ರಾಮಯ್ಯ ಕದಂಬ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ಜಾನಪದ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಟಿ. ತಿಮ್ಮೇಗೌಡ ಅಧ್ಯಕ್ಷತೆ ವಹಿಸಿದ್ದರು. ಕವಿ ಹಾಗೂ ಸಂಘಟಕ ಟಿ. ಸತೀಶ್ ಜವರೇಗೌಡ, ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಟಿ. ಸುರೇಶ್, ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ.ಡಿ.ಕೆ. ಉಷಾ, ಡಾ. ಕಾಂತರಾಜಪುರ ಸುರೇಶ್ ಉಪಸ್ಥಿತರಿದ್ದರು.

ಸಾಹಿತಿ ಡಾ.ಡಿ.ಕೆ. ಚಿತ್ತಯ್ಯ ಪೂಜಾರ್, ಜಲಸಂಪನ್ಮೂಲ ಇಲಾಖೆಯ ಎಂಜಿನಿಯರ್ ಸಿ. ಪುನೀತ್, ನೇಗಿಲಯೋಗಿ ಸಮಾಜಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಗಿರಿಯಪ್ಪ, ಪತ್ರಕರ್ತ ಎಂ.ಎಚ್. ಸುನೀಲ್ ಅವರಿಗೆ ಕದಂಬ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಂಗಕರ್ಮಿ ಮಲ್ಲಿಕಾರ್ಜುನಸ್ವಾಮಿ ಮಹಾಮನೆ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಕಾವ್ಯೋತ್ಸವ ಹಾಗೂ ನೃತ್ಯ ಪ್ರದರ್ಶನ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.