ಬೆಂಗಳೂರು: ‘10 ಸೆಕೆಂಡ್ ಅಂತರದಲ್ಲಿ ಎರಡು ಬಾರಿ ಸ್ಫೋಟ ಸಂಭವಿಸಿದ್ದು, ಇದು ಹೊರಗಿನವರ ದುಷ್ಕೃತ್ಯ’ ಎಂದು ದಿ ರಾಮೇಶ್ವರಂ ಕೆಫೆ ವ್ಯವಸ್ಥಾಪಕ ನಿರ್ದೇಶಕರಾದ (ಎಂ.ಡಿ) ಎಸ್. ದಿವ್ಯಾ ಹೇಳಿದರು.

ಸ್ಫೋಟದ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವಿದ್ಯುತ್ ಅವಘಡ ಹಾಗೂ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿಲ್ಲ. ಹೊರಗಡೆಯಿಂದ ತಂದಿಟ್ಟಿದ್ದ ಬ್ಯಾಗ್ನಿಂದ ಸ್ಫೋಟ ಸಂಭವಿಸಿದೆ’ ಎಂದರು.
.ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ: ತನಿಖೆ ಪ್ರಗತಿಯಲ್ಲಿ- ಸಿಎಂ.Video | ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ನಾಲ್ವರಿಗೆ ಗಾಯ.
‘ಗ್ರಾಹಕರು ತಟ್ಟೆಯನ್ನು ಇರಿಸಲು ಹಾಗೂ ಕೈ ತೊಳೆಯಲು ವ್ಯವಸ್ಥೆ ಮಾಡಲಾಗಿದೆ. ಇದೇ ಸ್ಥಳದಲ್ಲಿ ಮಧ್ಯಾಹ್ನ 12.55ಕ್ಕೆ ಸ್ಫೋಟ ಸಂಭವಿಸಿದೆ. ಗ್ರಾಹಕ ತಂದಿಟ್ಟಿದ್ದ ಬ್ಯಾಗ್ ಬಗ್ಗೆ ಸಾಕಷ್ಟು ಅನುಮಾನವಿದೆ. ಪೊಲೀಸರು ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಆ ವ್ಯಕ್ತಿ ಯಾರು ಎಂಬುದು ತನಿಖೆಯಿಂದ ತಿಳಿಯಬೇಕು’ ಎಂದು ಹೇಳಿದರು.

‘ಈ ಹಿಂದೆಯೂ ಎರಡು ಬಾರಿ ಅನುಮಾನಸ್ಪದ ಬ್ಯಾಗ್ಗಳು ಕೆಫೆಯಲ್ಲಿ ಪತ್ತೆಯಾಗಿದ್ದವು. ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು. ಒಂದು ಬ್ಯಾಗ್ನ್ನು ಪೊಲೀಸರೇ ತೆಗೆದುಕೊಂಡು ಹೋಗಿದ್ದರು. ಇದಾದ ಕೆಲದಿನಗಳ ನಂತರ, ಇದೀಗ ಬ್ಯಾಗ್ನಿಂದಲೇ ಸ್ಫೋಟ ಸಂಭವಿಸಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.