ಕೆ.ಆರ್.ಪುರ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 5ನೇ ಎಫ್ಟಿಎಸ್ಸಿ (ಪೋಕ್ಸೊ) ನ್ಯಾಯಾಲಯವು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಿದೆ.

ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಮೂರ್ತಿನಗರದ ಚಲುವಯ್ಯ ರಸ್ತೆಯ 9ನೇ ಕ್ರಾಸ್ ನಿವಾಸಿ ಗಣೇಶ್ (30) ಶಿಕ್ಷೆಗೆ ಒಳಗಾದ ಅಪರಾಧಿ.

ಶಾಲೆಯ ರಜಾ ದಿನಗಳಲ್ಲಿ ಮನೆಗೆ ಬರುತ್ತಿದ್ದ ಬಾಲಕಿ ಮೇಲೆ ಪದೇ ಪದೇ ಲೈಂಗಿಕ ಅತ್ಯಾಚಾರ ಎಸಗಿದ್ದ. ಅಲ್ಲದೇ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಈ ಸಂಬಂಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಪೂರ್ಣಗೊಳಿಸಿ ಇನ್ಸ್ಪೆಕ್ಟರ್ ಎಸ್.ಆರ್.ಮಂಜುನಾಥ್ ಅವರು ಆರೋಪಿ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ಸರ್ಕಾರಿ ವಕೀಲ ಅನುರೇವು ಅವರು ವಾದ ಮಂಡಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಎನ್.ನರಸಮ್ಮ ಅವರು ಅಪರಾಧಿಗೆ ಶಿಕ್ಷೆ ಮತ್ತು ದಂಡ ವಿಧಿಸಿ ಅದೇಶ ನೀಡಿದ್ದಾರೆ. ಅಲ್ಲದೇ ಬಾಲಕಿಗೆ ₹10 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಅದೇಶಿಸಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.