ಬೆಂಗಳೂರು: ಉತ್ತರ ತಾಲ್ಲೂಕಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸ್ನೇಹಿತನ ಪುತ್ರಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಹೊರವಲಯದ ತೋಟದಗುಡ್ಡದಹಳ್ಳಿ ನಿವಾಸಿ ರವಿ (44) ಎಂಬುವರನ್ನು ಬಂಧಿಸಿದ್ದು, ಆರೋಪಿ ವಿರುದ್ಧ ‘ಲೈಂಗಿಕ ಅಪರಾಧಿಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ’ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.

‘ಸಂತ್ರಸ್ತ ಬಾಲಕಿಯ ತಂದೆ ಆರೋಪಿ ಬಳಿ ₹70 ಸಾವಿರ ಸಾಲ ಪಡೆದಿದ್ದರು. ಈ ಪೈಕಿ ₹30 ಸಾವಿರ ಸಾಲ ತೀರಿಸಿದ್ದರು. ಉಳಿದ ಅಸಲು ಮತ್ತು ಬಡ್ಡಿ ನೀಡದಿದ್ದಕ್ಕೆ ರವಿಕುಮಾರ್ ಪೀಡಿಸುತ್ತಿದ್ದ. ಸಾಲ ವಸೂಲಿಯ ನೆಪದಲ್ಲಿ ಆರೋಪಿಯು ಬಾಲಕಿ ಮನೆಗೆ ಹೋಗುತ್ತಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ. ಆಗಸ್ಟ್ನಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯ ದೂರು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.