ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ, ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ವಿಚಾರಣೆಗಾಗಿ ಸಿಐಡಿಯ ವಿಶೇಷ ತನಿಖಾ ದಳವು (ಎಸ್‌ಐಟಿ) ಕಸ್ಟಡಿಗೆ ಪಡೆದುಕೊಂಡಿದ್ದು ಬುಧವಾರ ತನಿಖಾಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿ ಹೇಳಿಕೆ ದಾಖಲಿಸಿಕೊಂಡರು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಮುನಿರತ್ನ ಅವರನ್ನು ಬಾಡಿ ವಾರಂಟ್ ಮೇಲೆ ಮಂಗಳವಾರ ರಾತ್ರಿಯೇ ವಶಕ್ಕೆ ಪಡೆದುಕೊಂಡ ಎಸ್‌ಐಟಿ ಅಧಿಕಾರಿಗಳು, ಸಿಐಡಿ ಕಚೇರಿಗೆ ಕರೆ ತಂದಿದ್ದರು. ಕಚೇರಿಯಲ್ಲೇ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

‘ಮೊದಲ ದಿನದ ವಿಚಾರಣೆಯಲ್ಲಿ ಹಲವು ಪ್ರಶ್ನೆಗಳನ್ನು ಕೇಳಲಾಯಿತು. ದಾಖಲೆಗಳನ್ನೂ ಅವರ ಎದುರು ಇಡಲಾಯಿತು. ಆದರೆ, ಮುನಿರತ್ನ ತನಿಖೆಗೆ ಸಹಕಾರ ನೀಡುತ್ತಿಲ್ಲ. ನನಗೆ ಏನೂ ತಿಳಿದಿಲ್ಲ; ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡಲಾಗಿದೆ ಎಂದಷ್ಟೇ ಉತ್ತರಿಸುತ್ತಿದ್ದಾರೆ’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

‘ಆರೋಪಿ ಮೊಬೈಲ್ ಅನ್ನು ಜಪ್ತಿ ಮಾಡಲಾಗಿದ್ದು, ಪರಿಶೀಲನೆಗಾಗಿ ಸೈಬರ್ ತಜ್ಞರಿಗೆ ರವಾನಿಸಲಾಗಿದೆ. ಅತ್ಯಾಚಾರ ಪ್ರಕರಣದ ಸಂಬಂಧ ಆರೋಪಿಯನ್ನು ನ್ಯಾಯಾಲಯದ ಅನುಮತಿ ಪಡೆದು ಮತ್ತೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು’ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

‘ಮುನಿರತ್ನ ವಿರುದ್ಧ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಹಾಗೂ ಬೆಂಗಳೂರಿನ ವೈಯಾಲಿಕಾವಲ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಗಳ ಎಫ್‌ಐಆರ್ ಅನ್ನು ಪಡೆಯಲಾಗಿದೆ. ಕಗ್ಗಲೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಇನ್ನೂ ಆರು ಆರೋಪಿಗಳ ಹೆಸರು ಉಲ್ಲೇಖವಾಗಿದೆ. ಅವರನ್ನು ವಿಚಾರಣೆಗೆ ಕರೆಸಲಾಗುವುದು. ಅಗತ್ಯಬಿದ್ದರೆ ಬಂಧಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.